ಸಮ್ಮಿಶ್ರ ಸರ್ಕಾರದ ಆಯಸ್ಸು ಎಷ್ಟು: ಮುಂದಿನ 1 ತಿಂಗಳು ರಾಜಕೀಯ ದೊಂಬರಾಟಕ್ಕೆ ಸಾಕ್ಷಿಯಾಗಲಿದೆ ಕರ್ನಾಟಕ!

ಕರ್ನಾಟಕದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆ ಮುಗಿದಿದ್ದು, ಸಮ್ಮಿಶ್ರ ಸರ್ಕಾರಕ್ಕೆ ಹೊಸತೊಂದು ಸಮಸ್ಯೆ ಎದುರಾಗಿದೆ, ಸಮ್ಮಿಶ್ರ ಸರ್ಕಾರದ ಆಯಸ್ಸು ...
ಎಚ್.ಡಿ ಕುಮಾರಸ್ವಾಮಿ ಮತ್ತು ಜಿ.ಪರಮೇಶ್ವರ
ಎಚ್.ಡಿ ಕುಮಾರಸ್ವಾಮಿ ಮತ್ತು ಜಿ.ಪರಮೇಶ್ವರ
ಬೆಂಗಳೂರು: ಕರ್ನಾಟಕದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆ ಮುಗಿದಿದ್ದು, ಸಮ್ಮಿಶ್ರ ಸರ್ಕಾರಕ್ಕೆ ಹೊಸತೊಂದು ಸಮಸ್ಯೆ ಎದುರಾಗಿದೆ, ಸಮ್ಮಿಶ್ರ ಸರ್ಕಾರದ ಆಯಸ್ಸು ಎಷ್ಟು ದಿನ ಎಂಬುದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.
ಚುನಾವಣೆ ಪ್ರಚಾರದ ವೇಳೆ, ಹಲವು ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು ಭಾಗವಹಿಸಿರಲಿಲ್ಲ, ಕೆಲವರು ಹಾಜರಾಗಿದ್ದು ಒತ್ತಡಕ್ಕಾಗಿ ಎಂದು ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆ.
ಕಳೆದ ಕೆಲವು ತಿಂಗಳುಗಳ ಹಿಂದೆ ಮುಂಬಯಿ ರೆಸಾರ್ಟ್ ನಲ್ಲಿ ಶಾಸಕರನ್ನು ಇಡಲಾಗಿತ್ತು, ಕುಮಾರಸ್ವಾಮಿ ಯಡಿಯೂರಪ್ಪ ಅವರು ಮಾತನಾಡಿದ್ದಾರೆನ್ನಲಾದ ಆಡಿಯೋ ಟೇಪ್ ಬಿಡುಗಡೆ ಮಾಡಿದ ನಂತರ ಅವರು ವಾಪಾಸಾಗಿದ್ದರು.
ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಮತ್ತು ಅಥಣಿ ಶಾಸಕ ಮಹೇಶ್ ಕಮಟಳ್ಳಿ ಸೇರಿದಂತೆ ಕೆಲವರು ಬಿಜೆಪಿಗೆ  ಬೆಂಬಲ ನೀಡಿದ್ದಾರೆ ಎಂದು ಕೆಲ ಬಿಜೆಪಿ ಮುಖಂಡರು ತಿಳಿಸಿದ್ದಾರೆ.
ನಿಧಾನವಾಗಿ ಬಂಡಾಯ ಶಮನವಾಗಿದೆ, ಹಿರೇಕೆರೂರು ಶಾಸಕ ಬಿಸಿ ಪಾಟೀಲ್ ಅಸಮಾಧಾನಗೊಂಡಿದ್ದು ಪಕ್ಷದಲ್ಲಿ ನಿರ್ಲಕ್ಷ್ಯಿಸಲಾಗುತ್ತಿದೆ, ಯಾವುದೇ ಸಂಶಯಗಳನ್ನ ನಾನು ಮಾಧ್ಯಮಗಳ ಮುಂದೆ ಯಾವುದೇ ವಿಷಯವನ್ನು ಮಾತನಾಡುವುದಿಲ್ಲ ಎಂದು ಕುಮಟಳ್ಳಿ  ವಿವರಿಸಿದ್ದಾರೆ. 
ರಮೇಶ್ ಜಾರಕಿಹೊಳಿ ಬಹಿರಂಗವಾಗಿಯೇ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಮುಂಬಯಿಯ ರೆಸಾರ್ಟ್ ನಲ್ಲಿದ್ದ ಉಮೇಶ್ ಜಾಧವ್ ಚಿಂಚೋಳಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಏಪ್ರಿಲ್ 23 ರ ನಂತರ ರಾಜ್ಯ ರಾಜಕೀಯ ಸನ್ನಿವೇಶ ಬದಲಾಗಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಸಮ್ಮಿಶ್ರ ಸರ್ಕಾರದ 25 ಶಾಸಕರು ಹೊರಬರಲಿದ್ದಾರೆ, ಇವರು ಸರ್ಕಾರ ಉರುಳಿಸಲಿದ್ದಾರೆ, ನಾವು ಏನು ಮಾಡುವ ಅವಶ್ಯಕತೆಯಿಲ್ಲ ಎಂದು ಮಲ್ಲೇಶ್ವರಂ ಬಿಜೆಪಿ ಶಾಸಕ ಅಶ್ವತ್ಥನಾರಾಯಣ ಬಾಂಬ್ ಸಿಡಿಸಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇವೆ, ನಮಗೆ ಪಕ್ಷವಷ್ಟೇ ಮುಖ್ಯ, ಅದನ್ನು ನಾವು ಸರಿಪಡಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ. ಮೇ 23ರಂದು ಫಲಿತಾಂಶ ಬರಲಿದೆ, ಅದಾದ ನಂತರ ಸರ್ಕಾರ ಸಲೀಸಾಗಿ ನಡೆಯಲಿದೆ ಎಂದು ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com