ತಾಂತ್ರಿಕವಾಗಿ ಇನ್ನೂ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇನೆ: ರಮೇಶ್ ಜಾರಕಿಹೊಳಿ

ಸಚಿವ ಸ್ಥಾನ ಸಿಗದೆ ಕಾಂಗ್ರೆಸ್ ನಾಯಕರ ವಿರುದ್ಧ ಮುನಿಸಿಕೊಂಡು ಹಲವು ತಿಂಗಳುಗಳಿಂದ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಶಾಸಕ ರಮೇಶ್ ಜಾರಕಿಹೊಳಿ, ತಾಂತ್ರಿಕವಾಗಿ ಇನ್ನೂ ಕಾಂಗ್ರೆಸ್ ಪಕ್ಷದಲ್ಲಿರುವುದಾಗಿ ಹೇಳುವ ಮೂಲಕ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ.

Published: 23rd April 2019 12:00 PM  |   Last Updated: 23rd April 2019 12:13 PM   |  A+A-


Ramesh Jarakiholi

ರಮೇಶ್ ಜಾರಕಿಹೊಳಿ

Posted By : ABN ABN
Source : Online Desk
ಬೆಳಗಾವಿ: ಸಚಿವ ಸ್ಥಾನ ಸಿಗದೆ ಕಾಂಗ್ರೆಸ್ ನಾಯಕರ ವಿರುದ್ಧ ಮುನಿಸಿಕೊಂಡು ಹಲವು ತಿಂಗಳುಗಳಿಂದ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಶಾಸಕ ರಮೇಶ್ ಜಾರಕಿಹೊಳಿ, ತಾಂತ್ರಿಕವಾಗಿ ಇನ್ನೂ ಕಾಂಗ್ರೆಸ್ ಪಕ್ಷದಲ್ಲಿರುವುದಾಗಿ ಹೇಳುವ ಮೂಲಕ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ.

ಗೋಕಾಕ್ ನಲ್ಲಿಂದು ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕಾಂಗ್ರೆಸ್ ಪಕ್ಷಕ್ಕೆ ಇನ್ನೂ ರಾಜೀನಾಮೆ ಕೊಟ್ಟಿಲ್ಲ, ರಾಜೀನಾಮೆ ಕೊಟ್ಟ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

1999ರ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಗುಂಪುಗಾರಿಕೆ ಹೆಚ್ಚಾಗಿದೆ. ಇದೀಗ ಗುಂಪುಗಾರಿಕೆ ಮಿತಿ‌ಮೀರಿದೆ. ನಾನು ತಾಂತ್ರಿಕವಾಗಿ ಮಾತ್ರ ಕಾಂಗ್ರೆಸ್ ಪಕ್ಷದಲ್ಲಿ ಇದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ರಮೇಶ್ ಕತ್ತಿ ಟಿಕೆಟ್ ವಂಚಿತರಾದಾಗ ಯಡಿಯೂರಪ್ಪ ಬೆಳಗಾವಿಗೆ ಆಗಮಿಸಿ‌ ಮಾತುಕತೆ ಮೂಲಕ‌ ಬಿಕ್ಕಟ್ಟನ್ನು‌ ಶಮನಗೊಳಿಸಿದ್ದರು. ಆದರೆ, ಕಾಂಗ್ರೆಸ್ ಪಕ್ಷದಿಂದ ಯಾರೂ ತಮ್ಮನ್ನು‌ ಸಂಪರ್ಕಿಸಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಇಂತಹ ಪರಿಸ್ಥಿತಿಯೇ ಇಲ್ಲ ಎಂದು ಹೇಳಿದರು.

ಇಂಥ ವಾತಾವರಣದಲ್ಲಿ ಕಾಂಗ್ರೆಸ್‌ನಲ್ಲಿ ಮುಂದುವರಿಯುವುದು ಅಸಾಧ್ಯ. ಹಾಗಾಗಿ, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ‌‌ ಕೊಟ್ಟು ಬೇರೆ ಪಕ್ಷ ಸೇರ್ಪಡೆ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಇದೇ ಸಂದರ್ಭ ಸಹೋದರ ಲಖನ್  ಜಾರಕಿಹೊಳಿ ಸ್ಪರ್ಧೆ ಕುರಿತಂತೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿಗೆ ತಲೆ ಕೆಟ್ಟಿ ಹೋಗಿದೆ. ಈಗಾಗಲೇ ಸಹೋದರನೊಬ್ಬನನ್ನು ಹಾಳು ಮಾಡಿದ್ದಾರೆ. ಲಖನ್ ಜಾರಿಕಿಹೊಳಿ ಗೋಕಾಕ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾದರೆ ನಾನು ಅತ್ಯಂತ ಖುಷಿ ಪಡುತ್ತೇನೆ. ಬೇರೆಡೆಯಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ  ಹೇಳಿದರು.
Stay up to date on all the latest ಕರ್ನಾಟಕ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp