ಸಿದ್ದರಾಮಯ್ಯನವರ ಸಾಮರ್ಥ್ಯವನ್ನು ಒರೆಗೆ ಹಚ್ಚಲಿರುವ ಲೋಕಸಭೆ ಚುನಾವಣೆ ಫಲಿತಾಂಶ

ಲೋಕಸಭೆ ಚುನಾವಣೆಯ ಫಲಿತಾಂಶ ರಾಜ್ಯ ಸಮ್ಮಿಶ್ರ ಸರ್ಕಾರದ ಸ್ಥಿರತೆಯನ್ನು ನಿರ್ಧರಿಸಲಿದೆ...
ಸಿದ್ದರಾಮಯ್ಯ
ಸಿದ್ದರಾಮಯ್ಯ
ಮೈಸೂರು: ಲೋಕಸಭೆ ಚುನಾವಣೆಯ ಫಲಿತಾಂಶ ರಾಜ್ಯ ಸಮ್ಮಿಶ್ರ ಸರ್ಕಾರದ ಸ್ಥಿರತೆಯನ್ನು ನಿರ್ಧರಿಸಲಿದೆ. ರಾಜ್ಯದ ಪ್ರಮುಖ ನಾಯಕರ ಭವಿಷ್ಯ ಮಾತ್ರವಲ್ಲದೆ ಬಿಜಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರ ರಾಜಕೀಯ ಭವಿಷ್ಯದ ಮೇಲೆ ಕೂಡ ಲೋಕಸಭೆ ಚುನಾವಣೆ ಫಲಿತಾಂಶ ಭಾರೀ ಪರಿಣಾಮ ಬೀರಲಿದೆ.
ಸಿದ್ದರಾಮಯ್ಯನವರಿಗೆ ಇಲ್ಲಿ ಎರಡು ಸವಾಲುಗಳಿವೆ. ಅದು ಮೈಸೂರು ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಜಯ ಸಾಧಿಸುವುದು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ನಂತರ ಸಿದ್ದರಾಮಯ್ಯನವರು ಬಾದಾಮಿ ಕ್ಷೇತ್ರಕ್ಕೆ ಹೋದರು. ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ರಾಜಕೀಯ ಪುನರುಜ್ಜೀವವನ್ನು ಕಂಡುಕೊಂಡಿದ್ದಾರೆ. ಇಲ್ಲಿ ಈ ಬಾರಿ ಸಿದ್ದರಾಮಯ್ಯನವರು ಪ್ರಚಾರ ಕೈಗೊಂಡಿದ್ದರು.
ಈ ಎರಡೂ ಕ್ಷೇತ್ರಗಳಲ್ಲಿ ಅಹಿಂದ ಮತಗಳು ಯಾವ ರೀತಿ ಮತಗಳಾಗಿ ವಿಭಜನೆಯಾಗುತ್ತದೆ ಎಂದು ಕುತೂಹಲವಿದೆ. ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಸೋತರೆ ಸಿದ್ದರಾಮಯ್ಯನವರ ಸಾಮರ್ಥ್ಯದ ಬಗ್ಗೆ ಪ್ರಶ್ನೆ ಹುಟ್ಟಿಕೊಳ್ಳುತ್ತದೆ. ಪಕ್ಷದಲ್ಲಿ ಅವರ ನಾಯಕತ್ವದ ಬಗ್ಗೆ ಅನುಮಾನ ಮೂಡುತ್ತದೆ. ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯನವರ ಪಾತ್ರದ ಮೇಲೆ ಕೂಡ ಮುಂದಿನ ದಿನಗಳಲ್ಲಿ ಲೋಕಸಭೆ ಚುನಾವಣೆ ಫಲಿತಾಂಶ ಪರಿಣಾಮ ಬೀರಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com