ಉಪಚುನಾವಣೆ: ಚಿಂಚೋಳಿ, ಕುಂದಗೋಳ ಬಿಜೆಪಿ ಅಭ್ಯರ್ಥಿಗಳು ಫೈನಲ್

ಭಾರೀ ಕುತೂಹಲಕ್ಕೆ ಕಾರಣವಾಗಿರುವ ಕರ್ನಾಟಕದ ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬ್ಜೆಪಿ) ಅಭ್ಯರ್ಥಿಗಳು ಫೈನಲ್ ಆಗಿದ್ದಾರೆ.
ಉಪಚುನಾವಣೆ: ಚಿಂಚೋಳಿ, ಕುಂದಗೋಳ ಬಿಜೆಪಿ ಅಭ್ಯರ್ಥಿಗಳು ಫೈನಲ್
ಉಪಚುನಾವಣೆ: ಚಿಂಚೋಳಿ, ಕುಂದಗೋಳ ಬಿಜೆಪಿ ಅಭ್ಯರ್ಥಿಗಳು ಫೈನಲ್
ನವದೆಹಲಿ: ಭಾರೀ ಕುತೂಹಲಕ್ಕೆ ಕಾರಣವಾಗಿರುವ ಕರ್ನಾಟಕದ ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭ್ಯರ್ಥಿಗಳು ಫೈನಲ್ ಆಗಿದ್ದಾರೆ. ಕೇಂದ್ರ ಬಿಜೆಪಿ ಚುನಾವಣಾ ಸಮಿತಿ ಭಾನುವಾರ ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಮಾಜಿ ಶಾಸಕ, ಕಲಬುರ್ಗಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಅವರ ಪುತ್ರ ಅವಿನಾಶ್ ಜಾದವ್ ಚಿಂಚೋಳಿ ಕ್ಷೇತ್ರದ ಅಭ್ಯರ್ಥಿಯಾಗಿದ್ದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಸಂಬಂಧಿಯಾದ ಎಸ್.ಐ. ಚಿಕ್ಕನಗೌಡರ್  ಕುಂದಗೋಳದಲ್ಲಿ ಸ್ಪರ್ಧಿಸಲಿದ್ದಾರೆ.
ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಕಾರ್ಯದರ್ಶಿ ಜಗತ್ ಪ್ರಕಾಶ್ ನಡ್ಡಾ ಭಾನುವಾರ ಮಧ್ಯಾಹ್ನ ಎರಡೂ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ್ದಾರೆ.
ಚಿಂಚೋಳಿ ಕ್ಷೇತ್ರದ ಶಸಕರಾಗಿದ್ದ ಉಮೇಶ್ ಜಾಧವ್ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದು ಈಗ ಕಲಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿದ್ದಾರೆ. ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ, ಇನ್ನು ಕುಂದಗೋಳದ ಶಾಸಕರಾಗಿದ್ದ ಸಿ.ಎಸ್. ಶಿವಳ್ಳಿ ಇತ್ತೀಚೆಗೆ ಹೃದಯಾಘಾತದಿಂದ ನಿಧನರಾಗಿದ್ದ ಹಿನ್ನೆಲೆಯಲ್ಲಿ ಅಲ್ಲಿ ಉಪಚುನಾವಣೆ ನಡೆಯುತ್ತಿದೆ. 
ಎರಡೂ ಕ್ಷೇತ್ರಗಳಿಗೆ ಮೇ 19ರ<ದು ಮತದಾನ ನಡೆಯಲಿದ್ದು ಮೇ 23ಕ್ಕೆ ಫಲಿತಾಂಶ ಘೋಷಣೆಯಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com