ಕುಟುಂಬ ರಾಜಕಾರಣ, ಬಿಜೆಪಿಗೆ ಟಾಂಗ್ ಕೊಟ್ಟ ಸಚಿವ ಪ್ರಿಯಾಂಕಾ ಖರ್ಗೆ

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬ ರಾಜಕಾರಣವನ್ನು ಟೀಕಿಸುವ ಬಿಜೆಪಿ ಪಕ್ಷದವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್ ನೀಡಿದ್ದಾರೆ.
ಪ್ರಿಯಾಂಕಾ ಖರ್ಗೆ
ಪ್ರಿಯಾಂಕಾ ಖರ್ಗೆ

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬ ರಾಜಕಾರಣವನ್ನು ಟೀಕಿಸುವ ಬಿಜೆಪಿ ಪಕ್ಷದವರಿಗೆ ಸಚಿವ ಪ್ರಿಯಾಂಕಾ ಖರ್ಗೆ ಟಾಂಗ್ ನೀಡಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಬಿಜೆಪಿಯ ಕುಟುಂಬ ರಾಜಕಾರಣದ ಪಟ್ಟಿಯನ್ನು ಟ್ವೀಟ್ ಮಾಡಿರುವ ಪ್ರಿಯಾಂಕಾ ಖರ್ಗೆ, ತಮ್ಮದು ಕುಟುಂಬ ರಾಜಕಾರಣ ಎಂದು ಟೀಕಿಸುವ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಲಬುರಗಿ ದಕ್ಷಿಣ ಶಾಸಕ ಗುತ್ತೇದಾರ್,  ಚಿಂಚನಸೂರ್ ಮತ್ತು ಅವರ ಕುಟುಂಬ, ಆಳಂದ ಶಾಸಕ, ಸೇಡಂ ಶಾಸಕ ಮತ್ತು ಸಹೋದರರು ಕುಟುಂಬ ರಾಜಕಾರಣ ನಡೆಸುತ್ತಿದ್ದಾರೆ. ಈಗ ಇದಕ್ಕೆ ಚಿಂಚೋಳ್ಳಿ ಕ್ಷೇತ್ರ ಹೊಸದಾಗಿ  ಸೇರ್ಪಡೆಯಾಗಿದೆ ಎಂದು ಪ್ರಿಯಾಂಕಾ ಖರ್ಗೆ ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ  ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಶಾಸಕ ಉಮೇಶ್ ಜಾಧವ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ  ಚುನಾವಣೆ ಎದುರಿಸಿದ್ದಾರೆ.
ಉಮೇಶ್ ಜಾಧವ್ ಅವರ ರಾಜೀನಾಮೆಯಿಂದ ತೆರವಾಗಿರುವ ಕ್ಷೇತ್ರಕ್ಕೀಗ ಮೇ 19 ರಂದು ಉಪಚುನಾವಣೆ ನಡೆಯಲಿದೆ. ಉಪ ಚುನಾವಣೆಯಲ್ಲಿ ಉಮೇಶ್ ಜಾಧವ್ ಅವರ ಪುತ್ರ ಅವಿನಾಶ್  ಜಾಧವ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದರೆ, ಸುಭಾಷ್ ರಾಥೋಡ್ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ. ಈ ಚುನಾವಣೆ ಪ್ರಿಯಾಂಕ್ ಖರ್ಗೆ ಹಾಗೂ ಉಮೇಶ್ ಜಾಧವ್ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com