ಕುಂದಗೋಳ: ಘಟಾನುಘಟಿ ನಾಯಕರುಗಳ ಪ್ರಚಾರ, ಸಹಾನುಭೂತಿಯ ಅಲೆ ಕಾಂಗ್ರೆಸ್ ಅಭ್ಯರ್ಥಿಗೆ ವರ!

ಇತ್ತೀಚೆಗೆ ನಿಧನರಾದ ಸಚಿವ ಸಿ.ಎಸ್ ಶಿವಳ್ಳಿ ಅವರಿಂದ ತೆರವಾದ ಶಾಸಕ ಸ್ಥಾನಕ್ಕೆ ನಡೆಯುತ್ತಿರುವ ವಿಧಾನಸಭೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಳ್ಳಿ ...

Published: 30th April 2019 12:00 PM  |   Last Updated: 30th April 2019 02:25 AM   |  A+A-


Congress candidate for Kundgol Kusumavati Shivalli takes out a rally with party leaders

ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ನಾಯಕರು

Posted By : SD SD
Source : The New Indian Express
ಹುಬ್ಬಳ್ಳಿ: ಇತ್ತೀಚೆಗೆ ನಿಧನರಾದ ಸಚಿವ ಸಿ.ಎಸ್ ಶಿವಳ್ಳಿ ಅವರಿಂದ ತೆರವಾದ ಶಾಸಕ ಸ್ಥಾನಕ್ಕೆ ನಡೆಯುತ್ತಿರುವ ವಿಧಾನಸಭೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಳ್ಳಿ ಪತ್ನಿ ಕುಸುಮಾವತಿ ಶಿವಳ್ಳಿ ಕಣಕ್ಕಿಳಿದಿದ್ದಾರೆ.

ಲೋಕಸಭೆ ಸಭೆ ಚುನಾವಣೆಗೆ ರಣತಂತ್ರ ರೂಪಿಸಿದ್ದ ಕಾಂಗ್ರೆಸ್ ಹಿರಿಯ ನಾಯಕರಾದ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಮತ್ತು ಡಿ.ಕೆ ಶಿವಕುಮಾರ್ ಕುಸಮಾವತಿ ಪರ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.

ವಿಧಾನಸಭೆಯಲ್ಲಿ ತನ್ನ ಸಂಖ್ಯಾಬಲ ಉಳಿಸಿಕೊಳ್ಳಬೇಕಾದರೇ ಕಾಂಗ್ರೆಸ್ ಗೆ ಗೆಲ್ಲುವ ಅನಿವಾರ್ಯತೆ ಇದೆ, ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮೇ 19 ರಂದು ಉಪ ಚುನಾವಣೆಗೆ ಮತದಾನ ನಡೆಯಲಿದೆ,ಬಿಜೆಪಿಯಿಂದ ಎಸ್.ಐ ಚಿಕ್ಕನಗೌಡರ್ ಕಳೆದ ವಾರವೇ ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಗೆ ಇದು ಪ್ರತಿಷ್ಠೆಯ ಕದನವಾಗಿದೆ,  ಶಿವಳ್ಳಿ ನಿಧನದ ಅನುಕಂಪದ ಅಲೆ ಕಾಂಗ್ರೆಸ್ ಗೆ ಇದೆ, ಜೊತೆಗೆ ಜೆಡಿಎಸ್ ಮತಗಳು ಕಾಂಗ್ರೆಸ್  ಪಾಲಾಗುತ್ತವೆ, 2018ರ ಚುನಾವಣೆಯಲ್ಲಿ ಬಿಜೆಪಿ ಕೇವಲ 600 ಮತಗಳ ಅಂತರದಿಂದ ಸೋತಿತ್ತು.

2019 ರ ಚುನಾವಣೆ ಸನ್ನಿವೇಶವೇ ಬೇರೆಯೇ ಇದೆ, ಪರಿಸ್ಥಿತಿ ಕಾಂಗ್ರೆಸ್ ಪರವಾಗಿದೆ, ಕುಸುಮಾವತಿ ಅವರು ಸುಲಭವಾಗಿ ಗೆಲ್ಲಲಿದ್ದಾರೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.

ಕುಸುಮಾವತಿ ಕುರುಬ ಸಮುದಾಯಕ್ಕೆ ಸೇರಿದವರಾಗಿದ್ದಾರೆ, ಶಿವಳ್ಳಿ ಅವರ ಕುಟುಂಬಕ್ಕೆ ಹತ್ತಿರವಾಗಿದ್ದ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಬ್ಬರು ಸೇರಿ ಪ್ರಚಾರ ಮಾಡುತ್ತಿರುವುದು ಕುಸುಮಾವತಿ ಗೆಲುವು ಮತ್ತಷ್ಟು ಸುಲಭವಾಗಿದೆ, 

ಇನ್ನೂ ಬಿಜೆಪಿ ಕೂಡ ಕೈ ಕಟ್ಟಿ ಕೂತಿಲ್ಲ, ಚಿಕ್ಕನಗೌಡರ್ ನಾಮಪತ್ರ ಸಲ್ಲಿಸುವ ವೇಳೆ, ಗೋವಿಂದ್ ಕಾರಜೋಳ, ಬಸವರಾಜ್ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟರ್ ಮೊದಲಾದ ನಾಯಕರು ಹಾಜರಿದ್ದರು, 80 ಸಾವಿರಕ್ಕೂ ಅಧಿಕವಾಗಿ ಲಿಂಗಾಯಿತರಿದ್ದಾರೆ, ಗಾಗಿ ಗೆಲುವು ನಮ್ಮದೇ ಎಂದು ಬಿಜೆಪಿ ಹೇಳುತ್ತಿದೆ.
Stay up to date on all the latest ಕರ್ನಾಟಕ news with The Kannadaprabha App. Download now
facebook twitter whatsapp