ಬೆಂಗಳೂರು ಉತ್ತರ ಕ್ಷೇತ್ರ ಮೈತ್ರಿ ಅಭ್ಯರ್ಥಿಯಾಗಿ ಕೃಷ್ಣ ಭೈರೇಗೌಡ ಆಯ್ಕೆ

ಲೋಕಸಭೆ ಚುನಾವಣೆಯ ರಾಜ್ಯದ ಮೊದಲ ಹಂತದ ಮತದಾನ ನಡೆಯುವ ಕ್ಷೇತ್ರಗಳಿಗೆ ನಾಳೆ ನಾಮಪತ್ರ ಸಲ್ಲಿಕೆಗೆ ಕಡೆ ದಿನವಾಗಿದ್ದು ರಾಜ್ಯದ ಮೈತ್ರಿ ನಾಯಕರು ಕಡೆಗೂ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಿಸಿದ್ದಾರೆ.
ಕೃಷ್ಣ ಭೈರೇಗೌಡ
ಕೃಷ್ಣ ಭೈರೇಗೌಡ
ಬೆಂಗಳೂರು: ಲೋಕಸಭೆ ಚುನಾವಣೆಯ ರಾಜ್ಯದ ಮೊದಲ ಹಂತದ ಮತದಾನ ನಡೆಯುವ ಕ್ಷೇತ್ರಗಳಿಗೆ ನಾಳೆ ನಾಮಪತ್ರ ಸಲ್ಲಿಕೆಗೆ ಕಡೆ ದಿನವಾಗಿದ್ದು ರಾಜ್ಯದ ಮೈತ್ರಿ ನಾಯಕರು ಕಡೆಗೂ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಿಸಿದ್ದಾರೆ.
ಜೆಡಿಎಸ್ ತನ್ನ ಪಾಲಿನ ಕ್ಷೇತ್ರವಾದ ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟುಕೊಟ್ಟ ಬಳಿಕ ಕಾಂಗ್ರೆಸ್ ಪಕ್ಷದ ಕೃಷ್ಣ ಭೈರೇಗೌಡ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.ಸಚಿವ ಕೃಷ್ಣ ಭೈರೇಗೌಡ ನಾಳೆ (ಮಂಗಳವಾರ) ನಾಮಪತ್ರ ಸಲ್ಲಿಸಲಿದ್ದಾರೆ.
ಈ ಮೂಲಕ ಎಐಸಿಸಿ ಜಾತಿ ಲೆಕ್ಕಾಚಾರದಲ್ಲಿಯೂ ಮುಂದುವರಿದಿದ್ದು ಒಕ್ಕಲಿಗ ಅಭ್ಯರ್ಥಿಯನ್ನೇ ಕಣಕ್ಕಿಳಿಸುವ ಮೂಲಕ ಜಾಣ್ಮೆ ಮೆರೆದಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೃಷ್ಣ ಭೈರೇಗೌಡ ಹೆಸರು ಅಂತಿಮಗೊಂಡಿದೆ.
ಬೆಂಗಳೂರು ಉತ್ತರದಲ್ಲಿ ಬಿಜೆಪಿಯಿಂದ ಕೇಂದ್ರ ಸಚಿವರಾಗಿರುವ ಡಿ.ವಿ. ಸದಾನಂದ ಗೌಡ ಕಣದಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com