ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ 72 ಗಂಟೆ ನಿಷೇಧ ಹೇರಬೇಕು: ಬಿಜೆಪಿ ದೂರು

ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶದ್ರೋಹಿ ಎಂದು ಕರೆದಿರು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ....
ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು  ದೇಶದ್ರೋಹಿ ಎಂದು ಕರೆದಿರು ಮಾಜಿ ಸಿಎಂ  ಸಿದ್ದರಾಮಯ್ಯ ವಿರುದ್ದ ರಾಜ್ಯ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಮೋದಿ ಅವರನ್ನು ದೂರಿರುವ ಸಿದ್ದರಾಮಯ್ಯ ಅವರಿಗೆ ಚುನಾವಣಾ ಆಯೋಗ 72 ಗಂಟೆ ನಿಷೇಧ ಹೇರುವಂತೆ ಒತ್ತಾಯಿಸಿದೆ.ಇತ್ತೀಚೆಗೆ ಚಿಂಚೋಳಿಯಲ್ಲಿ ನಡೆದ ರ್ಯಾಲಿಯಲ್ಲಿ ಮೋದಿ ಅವರು ವಿದೇಶಿ ಅನುದಾನವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ.
ಧರ್ಮ ಮತ್ತು ಜಾತಿ ಆಧಾರದ ಮೇಲೆ ಜನರನ್ನು ವಿಭಜಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಮೋದಿ ಒಬ್ಬ ಸುಳ್ಳುಗಾರ, ಕೆಲಸ ಕೊಡಿಸುವುದಾಗಿ ಸುಳ್ಳು ಹೇಳುತ್ತಿದ್ದಾರೆ ಎಂದು ದೂರು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ದೂರಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com