ಚುನಾವಣೋತ್ತರ ಸಮೀಕ್ಷೆ, ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ಗೆಲುವಿನ ನಿರೀಕ್ಷೆ

2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂಬುದು ವಿವಿಧ ಸಂಸ್ಥೆಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.

Published: 19th May 2019 12:00 PM  |   Last Updated: 19th May 2019 07:26 AM   |  A+A-


Casual Photo

ಸಾಂದರ್ಭಿಕ ಚಿತ್ರ

Posted By : ABN ABN
Source : Online Desk
ಬೆಂಗಳೂರು:  2019ರ ಲೋಕಸಭಾ ಚುನಾವಣೆಯಲ್ಲಿ  ಕರ್ನಾಟಕದಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂಬುದು ವಿವಿಧ ಸಂಸ್ಥೆಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.

ಇಂಡಿಯಾ ಟುಡೇ ಚುನಾವಣೋತ್ತರ ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ 21 ರಿಂದ 25,  ಕಾಂಗ್ರೆಸ್ 3-6, ಜೆಡಿಎಸ್ 1-03, ಇತರರು 1 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಇದೆ.

ಸಿ ವೋಟರ್ ಸಮೀಕ್ಷೆ ಪ್ರಕಾರ ಕರ್ನಾಟಕದ 28 ಕ್ಷೇತ್ರಗಳ ಪೈಕಿಯಲ್ಲಿ ಬಿಜೆಪಿ 18, ಕಾಂಗ್ರೆಸ್ -7, ಜೆಡಿಎಸ್ 02- ಹಾಗೂ ಇತರರು 1 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ.

ಚಾಣಕ್ಯ ಸಮೀಕ್ಷೆ  ಪ್ರಕಾರ  ಬಿಜೆಪಿ 23, ಕಾಂಗ್ರೆಸ್ -ಜಿಡಿಎಸ್ ಮೈತ್ರಿಕೂಟ 05 ಇತರರು-0 ಎನ್ನಲಾಗಿದೆ.
Stay up to date on all the latest ಕರ್ನಾಟಕ news with The Kannadaprabha App. Download now
facebook twitter whatsapp