ಲೋಕಸಭಾ ಚುನಾವಣೆಯ ಫಲಿತಾಂಶ ಅನಿರೀಕ್ಷಿತ, ಮೋದಿಗೆ ಅಭಿನಂದನೆ: ಕುಮಾರಸ್ವಾಮಿ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಹಿನ್ನೆಡೆ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಫಲಿತಾಂಶ ಅನಿರೀಕ್ಷಿತ ಎಂದಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಹಿನ್ನೆಡೆ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಫಲಿತಾಂಶ ಅನಿರೀಕ್ಷಿತ ಎಂದಿದ್ದಾರೆ.

ಈ ಫಲಿತಾಂಶವನ್ನು ಗೌರವಿಸುತ್ತೇನೆ, ಮತ್ತೊಮ್ಮೆ ಜನಾದೇಶ ಪಡೆದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದ್ದಾರೆ.

ರಾಜ್ಯದ 28 ಲೋಕಸಭಾ ಹಾಗೂ ಕುಂದಗೋಳ, ಚಿಂಚೋಳಿಯಲ್ಲಿ ಗೆಲುವು ಸಾಧಿಸಿದ ಎಲ್ಲಾ ಅಭ್ಯರ್ಥಿಗಳಿಗೂ ಮುಖ್ಯಮಂತ್ರಿ ಶುಭಾಶಯ ಕೋರಿದ್ದಾರೆ.

 ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳ ಸೋಲಿನ ಕುರಿತು ಎರಡೂ ಪಕ್ಷಗಳ ನಾಯಕರು ಚರ್ಚಿಸುತ್ತೇವೆ. ರಾಜಕೀಯದಲ್ಲಿ ನಮ್ಮ ಪಕ್ಷವು ಹಲವು- ಸೋಲುಗಳನ್ನು ಕಂಡಿದೆ. ಸೋಲಿನಿಂದ ಪಕ್ಷದ ಕಾರ್ಯಕರ್ತರು ಯಾರೂ ಎದೆಗುಂದಬೇಕಾಗಿಲ್ಲ. ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಪಡಿಸಲು ಜೊತೆಯಾಗಿ ಶ್ರಮಿಸೋಣ ಎಂದಿದ್ದಾರೆ.

ಚುನಾವಣೆಯ ಸಂದರ್ಭದಲ್ಲಿ ಸಹಕರಿಸಿದ ಮೈತ್ರಿ ಪಕ್ಷಗಳ ಎಲ್ಲ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com