ತುಮಕೂರಿನಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡಗೆ ತೀವ್ರ ಮುಖಭಂಗ: ಬಿಜೆಪಿ ಅಭ್ಯರ್ಥಿಗೆ ಮುನ್ನಡೆ

ಗೊಂದಲ, ವಿರೋಧದ ನಡುವೆ ಪಟ್ಟು ಹಿಡಿದು ತುಮಕೂರಿನಿಂದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಭಾರಿ ಹಿನ್ನಡೆ ಅನುಭವಿಸಿದ್ದಾರೆ.
ಹೆಚ್ ಡಿ ದೇವೇಗೌಡ
ಹೆಚ್ ಡಿ ದೇವೇಗೌಡ
ತುಮಕೂರು: ಗೊಂದಲ, ವಿರೋಧದ ನಡುವೆ ಪಟ್ಟು ಹಿಡಿದು ತುಮಕೂರಿನಿಂದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಭಾರಿ ಹಿನ್ನಡೆ ಅನುಭವಿಸಿದ್ದಾರೆ. 
ಮತ ಎಣಿಕೆ ಪ್ರಾರಂಭದಲ್ಲಿ ದೇವೇಗೌಡರು ಮುನ್ನಡೆ ಕಾಯ್ದುಕೊಂಡಿದ್ದರು. ಆದರೆ 7 ನೇ ಸುತ್ತಿನ ಮತ ಎಣಿಕೆ ವೇಳೆಗೆ ತೀವ್ರ ಹಿನ್ನಡೆ ಎದುರಿಸಿರುವ ಮಾಜಿ ಪ್ರಧಾನಿ ದೇವೇಗೌಡ, ತೀವ್ರ ಮುಖಭಂಗ ಎದುರಿಸಿದ್ದಾರೆ. ಎದುರಾಳಿ ಬಿಜೆಪಿ ಅಭ್ಯರ್ಥಿ 17 ಸಾವಿರಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದು ಗೆಲುವಿನ ಹಾದಿಯಲ್ಲಿದ್ದಾರೆ. 
ಮೈತ್ರಿ ಅಭ್ಯರ್ಥಿಯಾಗಿ ತುಮಕೂರಿನಿಂದ ಸ್ಪರ್ಧಿಸಿದ್ದ ಹೆಚ್ ಡಿ ದೇವೇಗೌಡ,  ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರ ವಿರೋಧಕ್ಕೂ ಗುರಿಯಾಗಿದ್ದರು. 2014 ರಲ್ಲಿ ಸಂಸದರಾಗಿ ಆಯ್ಕೆಗೊಂಡಿದ್ದ ಕಾಂಗ್ರೆಸ್ ನ ಮುದ್ದ ಹನುಮೇಗೌಡ, ಮಧುಗಿರಿ ಕ್ಷೇತ್ರದ ಶಾಸಕ ಕೆಎನ್ ರಾಜಣ್ಣ   ದೇವೇಗೌಡ ತುಮಕೂರಿನಿಂದ ಸ್ಪರ್ಧಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com