ಸಾರ್ವಜನಿಕ ಸೇವೆ ನಿಲ್ಲಿಸುವುದಿಲ್ಲ -ಎಚ್. ಡಿ. ದೇವೇಗೌಡ ಸ್ಪಷ್ಟನೆ

ಸಮಾಜದ ಸುಧಾರಣೆಗಾಗಿ ದುಡಿಯುತ್ತಿರುವ ತಾವು ತಮ್ಮ ಸಾರ್ವಜನಿಕ ಸೇವೆಯನ್ನು ಎಂದಿಗೂ ನಿಲ್ಲಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದ ಪರಾಜಿತ ಮೈತ್ರಿ ಅಭ್ಯರ್ಥಿ ಹೆಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

Published: 23rd May 2019 12:00 PM  |   Last Updated: 23rd May 2019 08:23 AM   |  A+A-


HD Devegowda

ಎಚ್. ಡಿ. ದೇವೇಗೌಡ

Posted By : ABN ABN
Source : UNI
ಬೆಂಗಳೂರು: ಸಮಾಜದ ಸುಧಾರಣೆಗಾಗಿ ದುಡಿಯುತ್ತಿರುವ ತಾವು ತಮ್ಮ ಸಾರ್ವಜನಿಕ ಸೇವೆಯನ್ನು ಎಂದಿಗೂ ನಿಲ್ಲಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದ ಪರಾಜಿತ ಮೈತ್ರಿ ಅಭ್ಯರ್ಥಿ ಹೆಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಲೋಕಸಭಾ ಚುನಾವಣೆ ಫಲಿತಾಂಶ ಕುರಿತು ಟ್ವೀಟ್‌ ಮಾಡಿದ ಅವರು, ತಮಗೆ ಮತದಾನ ಮಾಡಿದ ಮತದಾರರಿಗೆ, ಚುನಾವಣೆ ಸಂದರ್ಭದಲ್ಲಿ ದುಡಿದ ಕಾಂಗ್ರೆಸ್-ಜೆಡಿಎಸ್‌ ಪಕ್ಷಗಳ ಕಾರ್ಯಕರ್ತರಿಗೆ ಹಾಗೂ ತಮ್ಮನ್ನು ಬೆಂಬಲಿಸಿದ ಪ್ರತಿಯೊಬ್ಬರಿಗೂ ಆಭಾರಿಯಾಗಿರುವುದಾಗಿ ಅವರು ತಿಳಿಸಿದ್ದಾರೆ.

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲಾ ಸಂಸದರಿಗೆ ಹಾಗೂ ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಶುಭಾಶಯಗಳನ್ನು ಅವರು ಟ್ವೀಟ್‌ ಮೂಲಕ ಸಲ್ಲಿಸಿದ್ದಾರೆ.
Stay up to date on all the latest ಕರ್ನಾಟಕ news with The Kannadaprabha App. Download now
facebook twitter whatsapp