ದೇಶ

ಕೈ, ಎಸ್ಪಿ, ಬಿಎಸ್ಪಿ WWF ಫೈಟ್

ಕೈ, ಎಸ್ಪಿ, ಬಿಎಸ್ಪಿ WWF ಫೈಟ್
Published On :

ಬಿಜ್ನೋರ್/ಅಲಿಗಡ: ಉತ್ತರಪ್ರದೇಶದಲ್ಲಿ ಕಾಂಗ್ರೆಸ್, ಎಸ್ಪಿ ಹಾಗೂ ಬಿಎಸ್ಪಿ 'ಡಬ್ಲ್ಯೂಡಬ್ಲ್ಯೂಎಫ್‌'ನಂತೆ ಜಗಳವಾಡುತ್ತವೆ. ಆದರೆ, ಕೇಂದ್ರದಲ್ಲಿ ಅಧಿಕಾರ ಪಡೆಯುವಾಗ ಈ ಮೂರೂ ಪಕ್ಷಗಳು ಒಂದಾಗುತ್ತವೆ.
 ಉತ್ತರಪ್ರದೇಶದ ಬಿಜ್ನೋರ್‌ನಲ್ಲಿ ಭಾನುವಾರ ನಡೆದ ರ್ಯಾಲಿಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಆಡಿದ ಮಾತುಗಳಿವು. ಇಲ್ಲಿ ಮಾತನಾಡಿದ ಮೋದಿ, ಸೋನಿಯಾ ಗಾಂಧಿ ಹಾಗೂ ಮುಲಾಯಂ ಸಿಂಗ್ ವಿರುದ್ಧ ಹರಿಹಾಯ್ದರು. ಈ ಇಬ್ಬರೂ ನಾಯಕರು ಮುಸ್ಲಿಮರನ್ನು ತಪ್ಪುದಾರಿಗೆ ಎಳೆದು ಮತಬ್ಯಾಂಕ್ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಈ ಚುನಾವಣೆಯಲ್ಲಿ ಯುಪಿಎಯನ್ನು ಸಿಬಿಐ ಕೂಡ ರಕ್ಷಿಸಲಾಗದು ಎಂದೂ ವ್ಯಂಗ್ಯವಾಡಿದರು.
ವಿಡಿಯೋ ಕಾನ್ಫರೆನ್ಸ್: ಮೋದಿ ಭಾನುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಾದ್ಯಂತ 6 ಲಕ್ಷ ಮತಗಟ್ಟೆಗಳ ಸಾವಿರಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. 'ನಾಲ್ಕು ತಲೆಮಾರುಗಳ ಲಕ್ಷಾಂತರ ಕಾರ್ಯಕರ್ತರ ಪರಿಶ್ರಮ ಮತ್ತು ತ್ಯಾಗದ ಫಲವಾಗಿ ನಾವು ಇಂದು ಈ ಮಟ್ಟಕ್ಕೆ ತಲುಪಿದ್ದೇವೆ.ಎಂದು ಮೋದಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.