ವ್ಯಕ್ತಿಯೊಬ್ಬನಿಂದಲೇ ನಿರ್ಧಾರ: ಪ್ರಿಯಾಂಕಾ

'ಜನರಿಗೆ ಅಧಿಕಾರ ಕೊಡುವುದೇ ನಮ್ಮ ಸಿದ್ಧಾಂತ. ಬಿಜೆಪಿಯಲ್ಲಿ ವ್ಯಕ್ತಿಯೊಬ್ಬನೇ ಎಲ್ಲ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾನೆ'- ಹೀಗೆಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ವಾದ್ರಾ. ರಾಯ್ಬರೇಲಿಯ ವಿವಿಧ ಗ್ರಾಮಗಳಲ್ಲಿ ಬುಧವಾರ ಪ್ರಚಾರ ನಡೆಸಿದ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಹೆಸರೆತ್ತದೆ ಟೀಕಾ ಪ್ರಹಾರ ನಡೆಸಿದರು. ಈ ಬಾರಿಯ ಚುನಾವಣೆಯಲ್ಲಿ ಎರಡು ಸಿದ್ಧಾಂತಗಳ ನಡುವೆ ಹೋರಾಟ ನಡೆಯುತ್ತಿದೆ. ಈ ಪೈಕಿ ಒಂದು ಸಿದ್ಧಾಂತ ಕೋಮುವಾದಕ್ಕೆ ಪ್ರಚೋದನೆ ನೀಡುತ್ತಿದೆ ಎಂದು ಅವರು ದೂರಿದ್ದಾರೆ.
ಹೊಣೆಯಿಂದ ನುಣುಚುವ ಮೋದಿ: ಕಾಂಗ್ರೆಸ್
ಗುಜರಾತ್ ಗಲಭೆಗಳಿಗೆ ಸಂಬಂಧಿಸಿದಂತೆ ನರೇಂದ್ರ ಮೋದಿ ಕ್ಷಮೆ ಯಾಚಿಸಿಲ್ಲ. ಅದಕ್ಕೆ ಸಂಬಂಧಿಸಿದ ಹೊಣೆಯನ್ನು ಅವರು ಹೊರುತ್ತಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ. ಸಿಖ್ ಗಲಭೆಗೆ ಸಂಬಂಧಿಸಿದಂತೆ ಪ್ರಧಾನಿ ಕ್ಷಮೆ ಯಾಚಿಸಿದ್ದರು. ಅದನ್ನು ಬಿಜೆಪಿ ನೆನಪು ಮಾಡಿಕೊಳ್ಳಲಿ ಎಂದಿದ್ದಾರೆ ಕಾಂಗ್ರೆಸ್ ನಾಯಕ ಮೀಮ್ ಅಫ್ಜಲ್. ಇದೇ ವೇಳೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪ್ರಚಾರಕ್ಕಾಗಿ 5 ಸಾವಿರ ಕೋಟಿ ವೆಚ್ಚ ಮಾಡುತ್ತಿದೆ. ಪ್ರಚಾರಕ್ಕಾಗಿ ಕಪ್ಪುಹಣವನ್ನು ಆ ಪಕ್ಷ ಬಳಸುತ್ತಿದೆ ಎಂದು ಕೇಂದ್ರ ಸಚಿವ ಕಪಿಲ್ ಸಿಬಲ್ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


