ದೇಶ

2ಜಿ ಹಗರಣ; ರಾಜಾ, ಕನಿಮೋಳಿ ವಿರುದ್ಧ ಆರೋಪಪಟ್ಟಿ ಸಲ್ಲಿಕೆ

2ಜಿ ಹಗರಣ; ರಾಜಾ, ಕನಿಮೋಳಿ ವಿರುದ್ಧ ಆರೋಪಪಟ್ಟಿ ಸಲ್ಲಿಕೆ
Published On :

ನವದೆಹಲಿ: 2 ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎ.ರಾಜಾ, ಡಿಎಂಕೆ ಸಂಸದೆ ಕನಿಮೋಳಿ, ಡಿಎಂಕೆ ನಾಯಕ ಕರುಣಾನಿಧಿ ಪತ್ನಿ ದಯಾಳು ಅಮ್ಮಾಳ್ ಸೇರಿದಂತೆ 19 ಮಂದಿ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಆರೋಪಪಟ್ಟಿ ಸಲ್ಲಿಸಿದೆ. ನವದೆಹಲಿಯಲ್ಲಿರುವ ಸಿಬಿಐನ ವಿಶೇಷ ನ್ಯಾಯಾಲಯಕ್ಕೆ ಅದನ್ನು ಸಲ್ಲಿಸಲಾಗಿದೆ. ಸ್ವಾನ್ ಟೆಲಿಕಾಂನ ಶಾಹಿದ್ ಉಸ್ಮಾನ್ ಬಲ್ವಾ, ವಿನೋದ್ ಗೋಯೆಂಕಾ ಹೆಸರೂ ಆರೋಪಪಟ್ಟಿಯಲ್ಲಿದೆ. ಕಪ್ಪುಹಣ ತಡೆ ನಿರ್ವಹಣಾ ಕಾಯ್ದೆ (ಪಿಎಂಎಲ್‌ಎ) ಅನ್ವಯ ಈ ಆರೋಪಪಟ್ಟಿ ಸಲ್ಲಿಸಲಾಗಿದೆ.
ಡಿಎಂಕೆ ಒಡೆತನದಲ್ಲಿರುವ ಕಲೈನಾರ್ ಟಿವಿಗೆ ಸ್ವಾನ್ ಟೆಲಿಕಾಂ ಕಂಪನಿ 200 ಕೋಟಿ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಈ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ.
ಇ.ಡಿ. ವಾದವೇನು?: ಡಿಎಂಕೆ ಒಡೆತನದಲ್ಲಿರುವ ಕಲೈನಾರ್ ಟಿವಿಗೆ ಅಕ್ರಮವಾಗಿ 200 ಕೋಟಿ ನೀಡಲಾಗಿದೆ. ಇದರಲ್ಲಿ ಡಿಎಂಕೆ ವರಿಷ್ಠ ಎಂ.ಕರುಣಾನಿಧಿ ಪತ್ನಿ ದಯಾಳು ಅಮ್ಮಾಳ್ ಶೇ.60ರಷ್ಟು ಪಾಲನ್ನು ಹೊಂದಿದ್ದಾರೆ. ಇದರ ಜತೆಗೆ ರಾಜ್ಯಸಭಾ ಸದಸ್ಯೆ ಕನಿಮೋಳಿ ಮತ್ತು ಶರತ್‌ಕುಮಾರ್ ಶೇ.20ರಷ್ಟು ಪಾಲು ಹೊಂದಿದ್ದಾರೆ.
ಇತರರು ಯಾರು?: ಕುಸೇಗಾಂವ್ ಫ್ರುಟ್ಸ್ ಆ್ಯಂಡ್ ವೆಜಿಟೆಬಲ್ಸ್ ಪ್ರೈ.ಲಿ.ನ  ಆಸಿಫ್ ಬಲ್ವಾ ಮತ್ತು ರಾಜೀವ್ ಅಗರ್ವಾಲ್, ಬಾಲಿವುಡ್ ನಿರ್ಮಾಪಕ ಕರೀಮ್ ಮೊರಾನಿ ಮತ್ತು ಕಲೈನಾರ್ ಟಿವಿಯ ವ್ಯವಸ್ಥಾಪಕ ನಿರ್ದೇಶಕ ಶರತ್‌ಕುಮಾರ್ ಹೆಸರೂ ಇದೆ.
* ಸಿಬಿಐ ವಿಶೇಷ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ ಇ.ಡಿ
* ಕರುಣಾನಿಧಿ ಪತ್ನಿ ದಯಾಳು ಅಮ್ಮಾಳ್ ಹೆಸರೂ ಉಲ್ಲೇಖ
* ಡಿಎಂಕೆ ಮುಖವಾಣಿ ಚಾನೆಲ್‌ಗೆ 200 ಕೋಟಿ ನೀಡಿಕೆ ಆರೋಪ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.