ಭೂಸ್ವಾಧೀನ ಮಸೂದೆ ಗುಜರಾತ್ ಬೆಸ್ಟ್

ನವದೆಹಲಿ: ಗುಜರಾತ್ನಲ್ಲಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಭೂಸ್ವಾಧೀನ ಮಸೂದೆ ಇತರ ರಾಜ್ಯಗಳಿಗೆ ಮಾದರಿಯಾಗಿದೆ.
- ಹೀಗೆಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ತನ್ನ ವರದಿಯಲ್ಲಿ ಅಭಿಪ್ರಾಯಪಟ್ಟಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವ್ಯಾಪಾರ ವಹಿವಾಟುಗಳನ್ನು ಉತ್ತೇಜಿಸಲು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಖಾಸಗಿ ಸಂಸ್ಥೆಯೊಂದು ಕೇಂದ್ರ ಕೈಗಾರಿಕೆ ಮತ್ತು ವಾಣಿಜ್ಯ ಸಚಿವಾಲಯಕ್ಕಾಗಿ ಸಿದ್ಧಪಡಿಸಿತ್ತು. ಈ ವರದಿಯಲ್ಲಿ ಮೋದಿ ಸರ್ಕಾರ ಜಾರಿಗೆ ಬಂದಿರುವ ಭೂಸ್ವಾಧೀನ ಮಸೂದೆ ಇತರ ರಾಜ್ಯ ಸರ್ಕಾರಗಳೂ ಕೂಡ ಅನುಷ್ಠಾನಕ್ಕೆ ಜಾರಿಗೆ ತರಬಹುದು ಎಂದು ಅದು ಶ್ಲಾಘಿಸಿದೆ.
ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಚುನಾವಣಾ ರ್ಯಾಲಿಗಳಲ್ಲಿ ಕಾಂಗ್ರೆಸ್ ಮತ್ತು ಇತರ ಪ್ರತಿಪಕ್ಷಗಳ ನಾಯಕರು ಟೀಕಾ ಪ್ರಹಾರ ನಡೆಸುತ್ತಿರುವಾಗಲೇ ಕೇಂದ್ರ ಸರ್ಕಾರದ ವತಿಯಿಂದಲೇ ಈ ವರದಿ ಪ್ರಕಟವಾಗಿರುವುದು ಗಮನಾರ್ಹವಾಗಿದೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಇತರ ನಾಯಕರು ನರೇಂದ್ರ ಮೋದಿ ಸರ್ಕಾರ ಕೈಗಾರಿಕೋದ್ಯಮಿಗಳಿಗೆ ಅತ್ಯಂತ ಕಡಿಮೆ ದರದಲ್ಲಿ ರೈತರ ಜಮೀನು ಹಂಚಿಕೆ ಮಾಡಿದ್ದಾರೆ ಎಂಬ ಆರೋಪಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಈ ವರದಿ ಉಲ್ಲೇಖನೀಯವಾಗಿದೆ.
ವರದಿಯಲ್ಲಿ ಏನಿದೆ?
-ಭೂಮಿ ವಶಪಡಿಸಿಕೊಳ್ಳಲು ಗುಜರಾತ್ನಲ್ಲಿ ಸರ್ಕಾರದ ಹಸ್ತಕ್ಷೇಪ ಅತ್ಯಂತ ಕಡಿಮೆಯಾಗಿದೆ. ಅದಕ್ಕಾಗಿ ಸರಳ ನಿಯಮ ಅನುಸರಿಸಲಾಗುತ್ತಿದೆ.
- ಕೈಗಾರಿಕೆ ಸ್ಥಾಪಿಸಲು ಬಯಸುವ ಉದ್ಯಮಿ ಗುಜರಾತ್ ಕೈಗಾರಿಕಾ ಅಭಿವೃದ್ಧಿ ನಿಗಮ (ಜಿಐಡಿಸಿ) ವನ್ನು ನೇರವಾಗಿ ಸಂಪರ್ಕಿಸಬಹುದು. ಸುಲಭವಾಗಿ ಜಮೀನನ್ನು ವಶಪಡಿಸಿಕೊಂಡು ನೀಡುವಂತೆ ಮನವಿ ಮಾಡಿಕೊಳ್ಳಬಹುದು.
- ಪರಿಸರ ಖಾತೆಯಿಂದ ಕೈಗಾರಿಕೆ ಸ್ಥಾಪನೆಗೂ ಅತ್ಯಂತ ಸುಲಭವಾಗಿ ಅನುಮತಿ ಸಿಗುವಂತೆ ಮಾಡುವ ಬಗ್ಗೆ ಸರಳ ನಿಯಮ ಅನುಸರಿಸಲಾಗುತ್ತಿದೆ.
ರಾಜ್ಯ ಮಾದರಿ ಉಲ್ಲೇಖ
ಖಾಸಗಿ ಸಂಸ್ಥೆ ನೀಡಿದ ವರದಿಯಲ್ಲಿ ಕರ್ನಾಟಕದಲ್ಲಿ ಕಾರ್ಮಿಕರ ನಿರ್ವಹಣೆ ಬಗ್ಗೆಯೂ ಮೆಚ್ಚುಗೆ ವಹಿಸಲಾಗಿದೆ. ಜತೆಗೆ ಮಹಾರಾಷ್ಟ್ರ, ಆಂಧ್ರಪ್ರದೇಶದಲ್ಲಿ ಕೈಗೊಂಡಿರುವ ಇದೇ ಮಾದರಿ ಬಗ್ಗೆ ಮತ್ತು ಭೂಸ್ವಾಧೀನ ಮಾಡಿಕೊಳ್ಳುವ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


