kannadaprabha

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್
ನವದೆಹಲಿ: ಹೊರ್ಮುಜ್ ಜಲಸಂಧಿ ಮತ್ತು ಓಮನ್ ಕೊಲ್ಲಿಯಲ್ಲಿ ವಾಣಿಜ್ಯ ನೌಕೆಗಳ ಮೇಲಿನ ದಾಳಿಗಳ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು, ತಮ್ಮ ಇರಾನಿನ ಸಹವರ್ತಿ ಮೊಹ್ಸೆನ್ ರೆಜಾಯಿ ನಡುವೆ ದೂರವಾಣಿ ಸಂಭಾಷಣೆ ನಡೆಸಿದರು. ಮಾತುಕತೆ ವೇಳೆ ಭಾರತೀಯ ನಾವಿಕರು ಹಾಗೂ ಟ್ಯಾಂಕರ್‌ಗಳ ಸುರಕ್ಷತೆ ಮತ್ತು ಭದ್ರತೆಯ ವಿಷಯವನ್ನು ಪ್ರಸ್ತಾಪಿಸಲಾಯಿತು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ವಕ್ತಾರ ರಣಧೀರ್ ಜೈಸ್ವಾಲ್, ರಾಷ್ಟ್ರೀಯ ಭದ್ರತಾ ಸಲಹೆಗಾರರು ಅಕ್ಟೋಬರ್ 12ರಂದು ತಮ್ಮ ಇರಾನಿನ ಸಹವರ್ತಿ ಇರಾನ್‌ನ ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯದರ್ಶಿ ಮೊಹ್ಸೆನ್ ರೆಜೈ ಅವರೊಂದಿಗೆ ಮಾತನಾಡಿದರು. ದ್ವಿಪಕ್ಷೀಯ ವಿಷಯಗಳು, ಪ್ರಾದೇಶಿಕ ಪರಿಸ್ಥಿತಿ ಮತ್ತು ಅಂತರರಾಷ್ಟ್ರೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು. ಭಾರತೀಯ ನಾವಿಕರು ಮತ್ತು ಭಾರತೀಯ ಟ್ಯಾಂಕರ್‌ಗಳ ಸುರಕ್ಷತೆಯ ವಿಷಯವೂ ಮಾತುಕತೆಯಲ್ಲಿ ಪ್ರಮುಖವಾಗಿತ್ತು ಎಂದು ಹೇಳಿದರು.

ನವದೆಹಲಿಯಲ್ಲಿ ನಡೆದ ಬಿಮ್‌ಸ್ಟೆಕ್ ಸಭೆಯ ಕುರಿತು ಜೈಸ್ವಾಲ್, "ಬಿಮ್‌ಸ್ಟೆಕ್ ಗೃಹ ಸಚಿವರ ಸಭೆಯನ್ನು ಭಾರತದ ಗೃಹ ಸಚಿವರು ಆಯೋಜಿಸಿದ್ದರು. ಎಲ್ಲಾ ಬಿಮ್‌ಸ್ಟೆಕ್ ದೇಶಗಳು ಇದರಲ್ಲಿ ಭಾಗವಹಿಸಿದ್ದವು, ಚರ್ಚೆಗಳು ಮತ್ತು ಸಭೆಯ ನಂತರ, 'ದೆಹಲಿ ಘೋಷಣೆ'ಯನ್ನು ಅಂಗೀಕರಿಸಲಾಯಿತು. ಇದರಲ್ಲಿ, ಎಲ್ಲಾ ಬಿಮ್‌ಸ್ಟೆಕ್ ಸದಸ್ಯ ರಾಷ್ಟ್ರಗಳು ಭಯೋತ್ಪಾದನೆ ವಿರುದ್ಧದ ಹೋರಾಟ, ಮಾದಕವಸ್ತು ಕಳ್ಳಸಾಗಣೆ ತಡೆಗಟ್ಟುವ ಕ್ರಮಗಳು ಮತ್ತು ಹಣ ವರ್ಗಾವಣೆಯ ವಿರುದ್ಧ ಸಹಕಾರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಹಕಾರವನ್ನು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದವು ಎಂದರು.

'ಭಾರತ ಮಧ್ಯಮ ಶಕ್ತಿಯಲ್ಲ, ಮಧ್ಯದಲ್ಲಿರುವ ಶಕ್ತಿ, ಜಗತ್ತು ಹೊಸ ಅಂತಾರಾಷ್ಟ್ರೀಯ ವ್ಯವಸ್ಥೆಯತ್ತ ಸಾಗುತ್ತಿದೆ': ವಿದೇಶಾಂಗ ಸಚಿವ ಜೈಶಂಕರ್

ರಷ್ಯಾ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ತೈಲ ಒಪ್ಪಂದದ ಕುರಿತ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ವಕ್ತಾರರು, ವಾಣಿಜ್ಯ ಒಪ್ಪಂದಗಳ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಹೇಳಿದರು. ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಸ್ಥಿರತೆಯನ್ನು ನಾವು ಬೆಂಬಲಿಸುತ್ತೇವೆ ಎಂದರು. ಇದಕ್ಕೂ ಮೊದಲು, ಸೌದಿ ಅರೇಬಿಯಾ ಮೇಲಿನ ದಾಳಿಯ ಕುರಿತು ಭಾರತದ ನಿಲುವನ್ನು ಸ್ಪಷ್ಟಪಡಿಸಿದ ಜೈಸ್ವಾಲ್, "ಸೌದಿ ಅರೇಬಿಯಾ ಮೇಲೆ ಹಲವಾರು ದಾಳಿಗಳು ನಡೆದಿವೆ. ಅರಾಮ್ಕೊ ಪ್ರಧಾನ ಕಚೇರಿಯ ಮೇಲೂ ದಾಳಿ ನಡೆಸಲಾಯಿತು. ಸೌದಿ ಅರೇಬಿಯಾದಲ್ಲಿ ನಾಗರಿಕ ಮೂಲಸೌಕರ್ಯದ ಮೇಲಿನ ಇಂತಹ ಎಲ್ಲಾ ದಾಳಿಗಳನ್ನು ನಾವು ಖಂಡಿಸುತ್ತೇವೆ. ಈ ದಾಳಿಗಳು ತಕ್ಷಣವೇ ನಿಲ್ಲಬೇಕು ಎಂದು ನಾವು ನಂಬುತ್ತೇವೆ. ಅವು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಸೌದಿ ಅರೇಬಿಯಾದ ಜನರು ಮತ್ತು ಸರ್ಕಾರವು ತನ್ನ ಸಾರ್ವಭೌಮತ್ವವನ್ನು ರಕ್ಷಿಸುವಲ್ಲಿ ನಾವು ನಿಲ್ಲುತ್ತೇವೆ ಮತ್ತು ಈ ಪ್ರದೇಶದಲ್ಲಿ ಶೀಘ್ರದಲ್ಲೇ ಶಾಂತಿ ಮತ್ತು ಸಾಮಾನ್ಯ ಸ್ಥಿತಿ ಪುನಃಸ್ಥಾಪಿಸಲ್ಪಡುತ್ತದೆ ಎಂದು ನಾವು ಭಾವಿಸುತ್ತೇವೆ ಎಂದರು.

ಬಳ್ಳಾರಿ: ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ; ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆ
ಬಳ್ಳಾರಿ: ವರದಕ್ಷಿಣೆಗಾಗಿ ಗಂಡ ಪೀಡಿಸುತ್ತಿದ್ದರಿಂದ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ ಕಾಲುವೆಗೆ ಎಸೆದು ಬಳಿಕ ತಾನೂ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬಳ್ಳಾರಿ ನಗರದ ಅಲ್ಲಿಪುರ ಬಳಿ ನಡೆದಿದೆ.

ಮೃತರನ್ನು ಬಳ್ಳಾರಿ ನಗರದ ಮಿಲ್ಲರ್ ಪೇಟೆ ನಿವಾಸಿ 29 ವರ್ಷದ ಲತೀಪಾ ಸಿಮ್ರಾನ್, 3 ವರ್ಷದ ಮಹಮ್ಮದ್ ಅಯಾನ್ ಮತ್ತು 2 ವರ್ಷದ ಆಯಿಷಾ ಫಾತಿಮಾ (2) ಎಂದು ಗುರುತಿಸಲಾಗಿದೆ. ಒಂದೇ ವೇಲ್‌ಗೆ ಮಕ್ಕಳನ್ನು ಕಟ್ಟಿ ಲತೀಪಾ ಸಿಮ್ರಾನ್ ಕಾಲುವೆಗೆ ಎಸೆದಿದ್ದರು. ಇಂದು ಬೆಳಗ್ಗೆ ಲತೀಪಾ ಸಿಮ್ರಾನ್ ಮೃತದೇಹ ಪತ್ತೆಯಾಗಿತ್ತು. ಬಳಿಕ ಕರ್ನಾಟಕದ ಗಡಿಭಾಗದ ನಾಗಲಾಪುರ ಬಳಿ ಇಬ್ಬರು ಮಕ್ಕಳ ಮೃತದೇಹಗಳು ಪತ್ತೆಯಾಗಿವೆ.

ಸುಪ್ರೀಂಕೋರ್ಟ್​ಗೆ ನನ್ನ ಬಗ್ಗೆ ತಪ್ಪು ಮಾಹಿತಿ: ಸರ್ಕಾರದ ವಿರುದ್ಧ ಡಿಜಿಪಿ ಅಲೋಕ್ ಕುಮಾರ್ ಅಸಮಾಧಾನ!

ಪ್ರಕರಣ ಸಂಬಂಧ ಪತಿ ಸದ್ದಾಂ ಹುಸೇನ್ ಸೇರಿ ಆರು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವರದಕ್ಷಿಣೆ ತರುವಂತೆ ಒತ್ತಾಯಿಸಿ, ನಿತ್ಯ ಹಲ್ಲೆ ನಡೆಸುವುದರ ಜೊತೆಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದ ಎಂದು ಸಿಮ್ರಾನ್ ಕುಟುಂಬಸ್ಥರು ಆರೋಪಿಸಿದ್ದು ಬಳ್ಳಾರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ
ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮಾಜಿ ಸಿಎಂ ವರ್ಚಸ್ಸಿಗೆ ಹನಿಟ್ರ್ಯಾಪ್ ಹೆಸರಿನಲ್ಲಿ ಮಸಿ ಬಳಿಯಲು ರೂಪಿಸಿದ ವ್ಯವಸ್ಥಿತ, ಸಂಘಟಿತ ಷಡ್ಯಂತ್ರವನ್ನು ಪ್ರಶ್ನಿಸಿದ್ದಕ್ಕೆ ನಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಯಾವುದೇ ಪ್ರಕರಣ ದಾಖಲಿಸದೇ ಇಂದು ಬೆಳಗ್ಗೆ ಜೆಡಿಎಸ್ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಶಂಕರ್ ಎಂಬ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದರು.

ರಾಜ್ಯ ಸರ್ಕಾರವು ನಮ್ಮ ಜನತಾದಳ ಜಾತ್ಯತೀತ ಸಾಮಾಜಿಕ ಮಾಧ್ಯಮ ತಂಡದ ಯುವ ಸದಸ್ಯರನ್ನು ಗುರಿಯಾಗಿಸಿಕೊಂಡಂತೆ ಕಾಣುತ್ತಿದೆ. ಶಂಕರ್ ನನ್ನು ವಶಕ್ಕೆ ಪಡೆಯಲಾಗಿದ್ದು ತಂಡದ ಮತ್ತೊಬ್ಬ ಸದಸ್ಯ ಮೋಹನ್ ಮತ್ತು ಅವರ ಕುಟುಂಬದ ಮೇಲೆ ಕಿರುಕುಳ ನೀಡಲಾಗುತ್ತಿದೆ ಎಂಬ ವರದಿಗಳು ನನಗೆ ಬಂದಿವೆ. ಈ ಯುವಕರನ್ನು ಏಕೆ ಗುರಿಯಾಗಿಸಲಾಗುತ್ತಿದೆ ಮತ್ತು ಯಾವ ಅಧಿಕಾರದ ಅಡಿಯಲ್ಲಿ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಎಂಟು ವರ್ಷಗಳಿಗೂ ಹೆಚ್ಚುಕಾಲ ರಾಜ್ಯವನ್ನು ಆಳಿದ ಮಾಜಿ ಮುಖ್ಯಮಂತ್ರಿ ವರ್ಚಸ್ಸಿಗೆ ಹನಿಟ್ರ್ಯಾಪ್ ಹೆಸರಿನಲ್ಲಿ ಮಸಿ ಬಳಿಯಲು ರೂಪಿಸಿದ ವ್ಯವಸ್ಥಿತ, ಸಂಘಟಿತ ಷಡ್ಯಂತ್ರವನ್ನು ಪ್ರಶ್ನಿಸಿದ್ದಕ್ಕೆ ನನ್ನನ್ನು ಹಾಗೂ ನನ್ನ ಜೊತೆಗಿರುವ ಹುಡುಗರನ್ನು ಟಾರ್ಗೆಟ್ ಮಾಡುತ್ತಿರುವುದು ಲಜ್ಜೆಗೆಡಿತನ. ಯಾವುದೇ ಪ್ರಕರಣ ದಾಖಲಿಸದೇ ಇಂದು ಬೆಳಗ್ಗೆ Janata Dal Secular ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಶಂಕರ್ ಎಂಬ ಯುವಕನನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ನಂತರ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪಕ್ಷದ ಕಾನೂನು ವಿಭಾಗ ದೂರು ದಾಖಲಿಸಿದ ಮೇಲೆ ಆ ಯುವಕನಿಂದ ಆತನ ಪತ್ನಿಗೆ ಕರೆ ಮಾಡಿಸಿ, "ಸಿಸಿಬಿ ಪೊಲೀಸರು ನನ್ನನ್ನು ಕರೆದುಕೊಂಡು ಹೋಗಿದ್ದಾರೆ" ಎಂದಷ್ಟೇ ಹೇಳಿಸಿ ಕರೆ ಕಟ್ ಮಾಡಿದ್ದೀರಿ! ಸಾಕು ಮಾಡಿ ನಿಮ್ಮ ಕಪಟ ನಾಟಕ.

ಸಿದ್ದರಾಮಯ್ಯ ಕೇಸ್ ಗೆ ಟ್ವಿಸ್ಟ್: ನಕಲಿ ವಿಡಿಯೋ ಶೇರ್ ಮಾಡುತ್ತಿದ್ದ ಇಬ್ಬರು ಅರೆಸ್ಟ್!

ಯಾವ ಆಧಾರದ ಮೇಲೆ ಆತನನ್ನು ಕರೆದುಕೊಂಡು ಹೋಗಿದ್ದೀರಿ?

ಸಿದ್ದರಾಮಯ್ಯ ಅವರ ವಿರುದ್ಧ ಸ್ಟಿಂಗ್ ಮಾಡಿ, ದೃಶ್ಯಗಳನ್ನು ಚಿತ್ರೀಕರಿಸಿ ಅವರ ಚಾರಿತ್ರ್ಯಹರಣಕ್ಕೆ ಕಾರಣನಾದ ನೀಚನನ್ನು ಬಿಟ್ಟು, ಆ ನೀಚತನವನ್ನು ಪ್ರಶ್ನಿಸಿದ ನನ್ನನ್ನು ನೇರವಾಗಿ ಎದುರಿಸಲಾಗದೆ ನನ್ನ ಹುಡುಗರ ಬೆನ್ಹತ್ತಿದ್ದೀರಿ! ಎಲ್ಲವನ್ನೂ ರೆಕಾರ್ಡ್ ಮಾಡಿದ 'ಮಾಧ್ಯಮದ ಮುಸುಕು' ಹಾಕಿಕೊಂಡಿರುವ ಆ 'ಸಂಚುಕೋರ' ರಾಜಾರೋಷವಾಗಿ ತಿರುಗಾಡುತ್ತಿದ್ದರೆ, ಆ ನೈಜ ಅಪರಾಧಿಯನ್ನು ಬಿಟ್ಟು ನಮ್ಮ ಸೋಶಿಯಲ್ ಮೀಡಿಯಾ ಹುಡುಗರ ಮೇಲೆ ಬಿದ್ದಿದ್ದೀರಿ. ಪ್ರಶ್ನೆ ಮಾಡಿದ್ದು ನಾನು. ಸಿಬಿಐ ತನಿಖೆಗೆ ಒತ್ತಾಯಿಸಿದ್ದು ನಾನು. ಧೈರ್ಯವಿದ್ದರೆ ನನ್ನ ಬಳಿಗೇ ನಿಮ್ಮ ಪೊಲೀಸರನ್ನು ಕಳಿಸಬೇಕಿತ್ತು, ಅಮಾಯಕರ ಮೇಲೇನು ನಿಮ್ಮ ಪ್ರತಾಪ.. ಅಷ್ಟೇ ಅಲ್ಲ, ಈಗ ನಮ್ಮ ಸೋಶಿಯಲ್ ಮೀಡಿಯಾ ತಂಡದ ಮೋಹನ್ ಎಂಬ ಇನ್ನೊಬ್ಬ ಹುಡುಗನ ಮನೆ ಮುಂದೆ ಹೋಗಿ ಪೊಲೀಸರು ಗಲಾಟೆ ಮಾಡುತ್ತಿದ್ದಾರೆ, ಅವರ ಕುಟುಂಬದವರಿಗೆ ಕಿರುಕುಳ ಕೊಡುತ್ತಿದ್ದಾರೆ ಎಂಬ ಮಾಹಿತಿ ನನಗೆ ಬಂದಿದೆ. ಇದೆಲ್ಲವನ್ನೂ ಸಹಿಸುವ ಪ್ರಶ್ನೆಯೇ ಇಲ್ಲ. ನಮ್ಮವರಿಗೆ ಹೀಗೆ ಸುಖಾಸುಮ್ಮನೆ ಕಿರುಕುಳ ಕೊಟ್ಟರೆ ಕೈಕಟ್ಟಿ ಕೂರುವುದಿಲ್ಲ ನಾವು. ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಎದುರಿಸಲು ಸಿದ್ಧರಿದ್ದೇವೆ.