ಫೀಫಾ ವಿಶ್ವಕಪ್ 2018: 3ನೇ ಸ್ಥಾನಕ್ಕಾಗಿ ಬೆಲ್ಜಿಯಂ, ಇಂಗ್ಲೆಂಡ್ ನಡುವೆ ಪೈಪೋಟಿ

ಸತತ ಒಂದು ತಿಂಗಳ ಕಾಲ ಫುಟ್ಬಾಲ್ ಅಭಿಮಾನಿಗಳಿಗೆ ರಸದೌತಣ ನೀಡಿದ ಫೀಫಾ ವಿಶ್ವಕಪ್ 2018ರ ಟೂರ್ನಿ ಅಂತಿಮ ಘಟ್ಟಕ್ಕೆ ಬಂದು ತಲುಪಿದ್ದು, ಇದೇ ಶನಿವಾರ 3ನೇ ಸ್ಥಾನಕ್ಕಾಗಿ ಬೆಲ್ಜಿಯಂ ಮತ್ತು ಇಂಗ್ಲೆಂಡ್ ತಂಡಗಳು ಸೆಣಸಾಡಲಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಮಾಸ್ಕೋ: ಸತತ ಒಂದು ತಿಂಗಳ ಕಾಲ ಫುಟ್ಬಾಲ್ ಅಭಿಮಾನಿಗಳಿಗೆ ರಸದೌತಣ ನೀಡಿದ ಫೀಫಾ ವಿಶ್ವಕಪ್ 2018ರ ಟೂರ್ನಿ ಅಂತಿಮ ಘಟ್ಟಕ್ಕೆ ಬಂದು ತಲುಪಿದ್ದು, ಇದೇ ಶನಿವಾರ 3ನೇ ಸ್ಥಾನಕ್ಕಾಗಿ ಬೆಲ್ಜಿಯಂ ಮತ್ತು ಇಂಗ್ಲೆಂಡ್ ತಂಡಗಳು ಸೆಣಸಾಡಲಿವೆ.
ಇನ್ನು ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದ ಈ ಎರಡೂ ತಂಡಗಳು ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಾಗಿದ್ದವು. ಆದರೆ, ಅದೃಷ್ಟ ಮತ್ತು ಸಿಕ್ಕ ಅವಕಾಶವನ್ನು ಸದುಪಯೊಗ ಪಡಿಸಿಕೊಳ್ಳದೇ ಪ್ರಶಸ್ತಿ ಎತ್ತಿಹಿಡಿಯುವ ಆಸೆಯನ್ನು ಕೈ ಬಿಟ್ಟಿವೆ. ಇದೀಗ ಅಂತಿಮ ಪ್ರಯತ್ನವಾಗಿ ಈ ಎರಡೂ ತಂಡಗಳು ನಾಳೆ 3ನೇ ಸ್ಥಾನಕ್ಕಾಗಿ ಸೆಣಸಾಡಲಿವೆ.
ಇನ್ನು ಇತ್ತೀಚೆಗೆ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬೆಲ್ಜಿಯಂ ತಂಡ ಫ್ರಾನ್ಸ್ ವಿರುದ್ಧ 1-0 ಅಂತರದಲ್ಲಿ ಗೆಲುವು ಸಾಧಿಸಿ ಫೈನಲ್ ಗೇರಿತ್ತು. ಇನ್ನು 2ನೇ ಸೆಮಿಫೈನಲ್ ಪಂದ್ಯದಲ್ಲಿ ಕ್ರೊವೇಷಿಯಾ ತಂಡದ ಇಂಗ್ಲೆಂಡ್ ತಂಡವನ್ನು 2-1 ಅಂತರದಲ್ಲಿ ರೋಚಕವಾಗಿ ಮಣಿಸಿ ಫೈನಲ್ ಗೇರಿತ್ತು. ಇಂಗ್ಲೆಂಡ್ ತಂಡ ಸುಲಭವಾಗಿ ಗೆಲ್ಲಬಹುದಾಗಿದ್ದ ಪಂದ್ಯವನ್ನು ತಾನೇ ತನ್ನ ಕೈಯಾರೆ ಹಾಳು ಮಾಡಿಕೊಂಡಿತು. ಪಂದ್ಯದ ಐದನೇ ನಿಮಿಷದಲ್ಲೇ ಇಂಗ್ಲೆಂಡ್ ತಂಡದ ಟ್ರಿಪ್ಪಿರ್ ಗೋಲು ಭಾರಿಸಿ ಇಂಗ್ಲೆಂಡ್ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದ್ದರಾದರೂ ಇದೇ ಮುನ್ನಡೆಯನ್ನು ಮುಂದುವರೆಸಿಕೊಂಡು ಹೋಗುವಲ್ಲಿ ಇಂಗ್ಲೆಂಡ್ ವಿಫಲವಾಗಿತ್ತು. 
ಪರಿಣಾಮ ಪಂದ್ಯದ 68ನೇ ನಿಮಿಷದಲ್ಲಿ ಕ್ರೊವೇಷಿಯಾದ ಇವಾನ್ ಪೆರಿಸಿಕ್ ಗೋಲು ಭಾರಿಸುವ ಮೂಲಕ ಕ್ರೊವೇಷಿಯಾ ತಂಡ ಸಮಬಲ ಸಾಧಿಸುವಂತೆ ನೋಡಿಕೊಂಡರು. ಪಂದ್ಯದ ಅವಧಿ ಮುಕ್ತಾಯದ ವೇಳೆಗೆ ಎರಡೂ ತಂಡಗಳು 1-1ಗೋಲುಗಳ ಸಮಬಲ ಸಾಧಿಸಿದ್ದರಿಂದ ಹೆಚ್ಚುವರಿ ಸಮಯಕ್ಕೆ ಪಂದ್ಯ ವಿಸ್ತರಿಸಲಾಯಿತು. ಹೆಚ್ಚುವರಿ ಸಮಯದಲ್ಲಿ ಕ್ರೊವೇಷಿಯಾದ ಮಾರಿಯೋ ಮ್ಯಾಂಡ್ಕುಕಿಕ್ ಗೋಲು ಭಾರಿಸುವ ಮೂಲಕ ಕ್ರೊವೇಷಿಯಾ ತಂಡ ಮೇಲುಗೈ ಸಾಧಿಸುವಂತೆ ನೋಡಿಕೊಂಡರು.  ಅಂತಿಮವಾಗಿ ಪಂದ್ಯದ ಅವಧಿ ಮುುಕ್ತಾಯದ ವೇಳೆಗೆ ಕ್ರೊವೇಷಿಯಾ ತಂಡ 2-1 ಅಂತರದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ ಇದೇ ಮೊದಲ ಬಾರಿಗೆ ಫೈನಲ್ ಗೇರಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com