ಸರನ್ಶಕ್(ರಷ್ಯಾ): ಜಪಾನ್ ತಂಡದ ಆಟಗಾರ ಯುಯಾ ಒಸಾಕೊ 73ನೇ ನಿಮಿಷದಲ್ಲಿ ಸಿಡಿಸಿದ ಗೋಲಿನಿಂದ ಜಪಾನ್ ಕೊಲಂಬಿಯಾ ವಿರುದ್ಧ ರೋಚಕ ಗೆಲುವು ಸಾಧಿಸಿದೆ.
21ನೇ ಫಿಫಾ ವಿಶ್ವಕಪ್ ಪಂದ್ಯಾವಳಿಯ ಹೆಚ್ ಗುಂಪಿನ ಆರಂಭಿಕ ಪಂದ್ಯದಲ್ಲಿ ಜಪಾನ್ ಕೊಲಂಬಿಯಾ ವಿರುದ್ಧ 2-1 ಗೋಲುಗಳಿಂದ ಜಯ ಗಳಿಸಿದೆ.
ದ್ವಿತೀಯಾರ್ಧಕ್ಕೆ ಉಭಯ ತಂಡಗಳು 1-1 ಗೋಲುಗಳಿಂದ ಸಮಬಲ ಸಾಧಿಸಿದ್ದವು. ಇನ್ನು ಪಂದ್ಯ ಡ್ರಾನಲ್ಲಿ ಅಂತ್ಯವಾಗಲಿದೆ ಎಂದು ಎಲ್ಲರೂ ಅಂದುಕೊಳ್ಳುತ್ತಿರುವಾಗಲೇ ಯುಯಾ ಒಸಾಕೊ ಗೋಲು ಬಾರಿಸಿ ಜಪಾನ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.