ಫಿಫಾ ವಿಶ್ವಕಪ್ 2014

ವಿಶ್ವಕಪ್ ಯಶಸ್ಸಿಗೆ ಬ್ಲಾಟರ್ ಸಂತಸ

ವಿಶ್ವಕಪ್ ಯಶಸ್ಸಿಗೆ ಬ್ಲಾಟರ್ ಸಂತಸ
Published On :

ರಿಯೋ ಡಿ ಜೆನೈರೊ: ಪ್ರಸಕ್ತ ಫಿಫಾ ವಿಶ್ವಕಪ್ ಪಂದ್ಯಾವಳಿಯು ತೀವ್ರ ವಿರೋಧ ಮತ್ತು ಪ್ರತಿಭಟನೆಯ ನಡುವೆಯೂ ಯಶಸ್ವಿಯಾಗಿದ್ದು, ಬಹಳ ಸಂತೋಷವಾಗಿದೆ ಎಂದು ಫಿಫಾ ಅಧ್ಯಕ್ಷ ಸೆಪ್ ಬ್ಲಾಟರ್ ತಿಳಿಸಿದ್ದಾರೆ. ಇಂದು ನನಗೆ ಹೆಚ್ಚು ಸಂತೋಷವಾಗುತ್ತಿದೆ. ಇದು ಕ್ರೀಡೆ ಹಾಗೂ ಬ್ರೆಜಿಲ್ ದೇಶದ ಯಶಸ್ಸು ಎಂದು ಬ್ಲಾಟರ್ ಬಣ್ಣಿಸಿದ್ದಾರೆ.
ವಿಶ್ವಕಪ್ ಪಂದ್ಯಾವಳಿ ವಿರುದ್ಧ ಕಳೆದ ಒಂದು ವರ್ಷದಿಂದ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು. ದೇಶದ ಮೂಲಭೂತ ಸೌಕರ್ಯದ ಬದಲು ವಿಶ್ವಕಪ್ನ ಕ್ರೀಡಾಂಗಣ ಸೇರಿದಂತೆ ಇತರೆ ಅಂಶಗಳಿಗೆ ಹೆಚ್ಚು ಹಣ ಬಳಸಿರುವುದಕ್ಕೆ ವಿರೋಧ ವ್ಯಕ್ತವಾಗಿತ್ತು.
ಈ ಯಶಸ್ಸಿನ ಕೀರ್ತಿಯನ್ನು ವಿಶ್ವಕಪ್ ಅನ್ನು ಪ್ರೀತಿಯಿಂದ ಸ್ವೀಕರಿಸಿರುವ ಬ್ರೆಜಿಲ್ ಜನತೆಗೆ ಅರ್ಪಿಸಲು ಇಚ್ಛಿಸುತ್ತೇನೆ ಎಂದು ಬ್ಲಾಟರ್ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.