ಸ್ಪೇನ್ಗೆ ವಿಶ್ವಕಪ್: ಅಧ್ಯಯನದ ಸ್ಪಷ್ಟನೆ

ಜಿನೇವಾ: ಗುಣಮಟ್ಟದ ಆಟಗಾರರನ್ನು ಹೊಂದಿರುವ ಹಾಲಿ ಚಾಂಪಿಯನ್ ಸ್ಪೇನ್ ತಂಡ ಈ ಬಾರಿ ಬ್ರೆಜಿಲ್ನಲ್ಲಿ ನಡೆಯುತ್ತಿರುವ ಫುಟ್ಬಾಲ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಪಟ್ಟ ಧರಿಸಲಿದೆ ಎಂದು ಸಂಖ್ಯಾ ಶಾಸ್ತ್ರಜ್ಞರೊಬ್ಬರು ತಿಳಿಸಿದ್ದಾರೆ.
ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಎಲ್ಲ 32 ತಂಡಗಳ ಆಟಗಾರರ ಕುರಿತು ನಾವು ಆಳವಾಗಿ ಅಧ್ಯಯನ ನಡೆಸಿದ್ದೇವೆ. ಸಮರ್ಥ ಆಟಗಾರರನ್ನು ಹೊಂದಿರುವ ಸ್ಪೇನ್ ವಿಶ್ವಕಪ್ ಗೆಲ್ಲಲಿದೆ ಎಂದು ಸ್ವಿಸ್ ಮೂಲದ ಅಂತಾರಾಷ್ಟ್ರೀಯ ಕ್ರೀಡಾ ಅಧ್ಯಯನ ಕೇಂದ್ರದ ಫುಟ್ಬಾಲ್ ಅಧ್ಯಯನಕಾರರೊಬ್ಬರು ಹೇಳಿದ್ದಾರೆ.'ನಮ್ಮ ಊಹೆ ಪ್ರಕಾರ ಈ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಬ್ರೆಜಿಲ್ ತಂಡವನ್ನು ಸ್ಪೇನ್ ಸೋಲಿಸಲಿದೆ. ಅರ್ಜೆಂಟೀನಾ 3ನೇ ಸ್ಥಾನ ಪಡೆದರೆ, ಫ್ರಾನ್ಸ್ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಡಲಿದೆ' ಎಂದು ಅಧ್ಯಯನಕಾರರು ತಿಳಿಸಿದ್ದಾರೆ.
ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬ ಆಟಗಾರನ ವೃತ್ತಿ ಜೀವನದಲ್ಲಿ ಮಾಡಿದ ಸಾಧನೆ, ಕಳೆದ ಎರಡು ವರ್ಷಗಳಲ್ಲಿ ಮಾಡಿದ ಸಾಧನೆ, 2012ರಿಂದ ರಾಷ್ಟ್ರೀಯ ತಂಡದಲ್ಲಿ ಗಳಿಸಿದ ಸ್ಥಾನ ಹಾಗೂ ಇದುವರೆಗೂ ಒಟ್ಟು ಆಡಿದ ವಿಶ್ವಕಪ್ ಪಂದ್ಯಗಳನ್ನು ಪರಿಗಣಿಸಿ ಯಾವ ತಂಡಕ್ಕೆ ಯಾವ ಸ್ಥಾನ ಸಿಗಲಿದೆ ಎಂಬುದನ್ನು ಅಧ್ಯಯನಕಾರಾರು ತಿಳಿದುಕೊಂಡಿದ್ದಾರಂತೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


