ಫಿಫಾ ವಿಶ್ವಕಪ್ 2014

ನಟಾಲ್‌ಗೆ ಅಪ್ಪಳಿಸಿದ ಪ್ರವಾಹ

ನಟಾಲ್‌ಗೆ ಅಪ್ಪಳಿಸಿದ ಪ್ರವಾಹ
Published On :

ರಿಯೋ ಡಿ ಜನೈರೋ: ಬ್ರೆಜಿಲ್ ಇಡೀ ವಿಶ್ವಕ್ಕೆ ಫುಟ್ಬಾಲ್ ಜ್ವರ ಹಿಡಿಸಿದೆ. ಆದರೆ, ಅಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ವಿಶ್ವಕಪ್ ಆತಿಥ್ಯ ವಹಿಸಿಕೊಂಡಿರುವ ನಗರ ನಟಾಲ್ ಈಗ ಜ್ವರದಿಂದ ಬಳಲುವಂತಾಗಿದೆ. ಕಾರಣ, ನಟಾಲ್ ನಗರಕ್ಕೆ ಭಾರೀ ಪ್ರವಾಹ ಅಪ್ಪಳಿಸಿದೆ. ನಟಾಲ್‌ನಲ್ಲಿ ನಡೆಯಲಿರುವ ಪಂದ್ಯಗಳಿಗೆ ಇದು ತೊಂದರೆಯೊಡ್ಡಬಹುದು ಎನ್ನಲಾಗಿದೆ. ಆದರೆ, ಇದುವರೆಗೂ ಯಾವುದೇ ರೀತಿಯ ಸಾವು ನೋವು ಸಂಬವಿಸಿರುವ ಬಗ್ಗೆ ವರದಿಯಾಗಿಲ್ಲ. ಆದರೆ, ಜೂನ್ ಆರಂಭದಿಂದಲೂ ಮಳೆ ಸುರಿಯುತ್ತಿದ್ದು, ಈಗ ಅಲ್ಲಿನ ಜನರಿಗೆ ಎಚ್ಚರಿಕೆ ನೀಡುವಂತಾಗಿದೆ. ಅಲ್ಲದೆ ಸುತ್ತಮುತ್ತಲಿನ ನಗರಗಳಲ್ಲಿ ಪ್ರವಾಹದಿಂದ ಹಲವಾರು ಜನರು ತಮ್ಮ ನಿವಾಸಗಳನ್ನು ಕಾಲಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.