ವಿಶ್ವಕಪ್ ಫುಟ್ಬಾಲ್ ಟೂರ್ನಿಗೆ ಪ್ರತಿಭಟನೆ ಅಡ್ಡಿ: ಪೀಲೆ ಆತಂಕ
ಹುಕ್ವಿಲುಕನ್ (ಮೆಕ್ಸಿಕೊ): ವಿಶ್ವಕಪ್ ಆತಿಥ್ಯ ವಹಿಸಿರುವ ಬ್ರೆಜಿಲ್ನಲ್ಲಿ ಸಾಮಾಜಿಕ ಪ್ರತಿಭಟನೆ ದಿನೇದಿನೆ ಹೆಚ್ಚಾಗುತ್ತಿದ್ದು, ಇದರಿಂದ ವಿಶ್ವಕಪ್ ವೀಕ್ಷಿಸಲು ಆಗಮಿಸುವ ವಿದೇಶಿ ಅಭಿಮಾನಿಗಳು ತಮ್ಮ ಪ್ರವಾಸವನ್ನು ರದ್ದುಗೊಳಿಸುವ ಸಾಧ್ಯತೆ ಇದೆ ಎಂದು ಬ್ರೆಜಿಲ್ ಫುಟ್ಬಾಲ್ ದಂತಕತೆ ಪೀಲೆ ಅಭಿಪ್ರಾಯಪಟ್ಟಿದ್ದಾರೆ.
ಕಳೆದ ಕೆಲವು ವಾರಗಳಿಂದ ಪ್ರತಿಭಟನೆ ಹೆಚ್ಚಾಗಿದ್ದು, ಹೀಗೆ ಮುಂದುವರಿದರೆ ಫುಟ್ಬಾಲ್ ವಿಶ್ವಕಪ್ ಮೇಲೆ ನಕಾರಾತ್ಮಕ ಪರಿಣಾಮ ಬೀರುವುದರಲ್ಲಿ ಅನುಮಾನವಿಲ್ಲ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೀಲೆ ಅಭಿಪ್ರಾಯಪಟ್ಟಿದ್ದಾರೆ.
ಪ್ರಸ್ತುತ ಪ್ರತಿಭಟನೆಯಿಂದಾಗಿ ಫುಟ್ಬಾಲ್ ವಿಶ್ವಕಪ್ಗಾಗಿ ಪ್ರವಾಸ ಬೆಳೆಸುವ ವಿದೇಶಿ ಅಭಿಮಾನಿಗಳಲ್ಲಿ ಶೇ.25ರಷ್ಟು ಮಂದಿ ಚಿಂತೆಗೊಳಗಾಗಿದ್ದು, ಪ್ರವಾಸವನ್ನು ರದ್ದುಗೊಳಿಸುವ ಆಲೋಚನೆ ಮಾಡಿದ್ದಾರೆ. ಇದು ದೇಶಕ್ಕೆ ಬೃಹತ್ ಪ್ರಮಾಣದ ನಷ್ಟವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

