ಕೋಳಿ ಮಾಂಸವನ್ನು ತೊಳೆದು ಅದಕ್ಕೆ ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಗರಂ ಮಸಾಲ ಪುಡಿ, ಕಾಳು ಮೆಣಸಿನ ಪುಡಿ, ಅರಿಶಿಣದ ಪುಡಿ ಹಾಗೂ ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ 1 ಗಂಟೆಗಳ ಕಾಲ ನೆನೆಯಲು ಬಿಡಬೇಕು.
ನಂತರ ಬಾಣಲೆಗೆ ಅರ್ಥದಷ್ಟು ಎಣ್ಣೆ ಹಾಕಿ ಕಾಯಿಸಬೇಕು. ಕಾದ ಎಣ್ಣೆಗೆ ಮಸಾಲೆ ಮಿಶ್ರಿತ ಚಿಕನ್ ಹಾಕಿ ಸ್ವಲ್ಪ ಕಂದು ಬಣ್ಣ ಬರುವಾಗ ತೆಗೆಯಬೇಕು.
ನಂತರ ಪಾತ್ರೆಯೊಂದಕ್ಕೆ ಸ್ವಲ್ಪ ಎಣ್ಣೆ ಹಾಕಿ ಅದಕ್ಕೆ ಜಜ್ಜಿದ ಶುಂಠಿ, ಬೆಳ್ಳುಳ್ಳಿ, ಹಸಿ ಮೆಣಸಿನಕಾಯಿ, ಈರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗ ಹುರಿದು ಟೊಮೆಟೊ ಹಾಕಿ ನಂತರ ಎಣ್ಣೆಯಲ್ಲಿ ಕರಿದ ಮಾಂಸವನ್ನು ಹಾಕಿ ಮಿಶ್ರಣ ಮಾಡಿದರೆ ಚಿಕನ್ ಪೆಪ್ಪರ್ ಡ್ರೈ ಸವಿಯಲು ಸಿದ್ಧವಾಗುತ್ತದೆ.