ಒಲೆಯ ಮೇಲೆ ಬಾಣಲೆಯನ್ನು ಇಟ್ಟು ಸ್ವಲ್ಪ ಎಣ್ಣೆ ಹಾಕಿ. ಎಣ್ಣೆ ಕಾದ ನಂತರ ಇದಕ್ಕೆ ಈರುಳ್ಳಿ ಹಾಕಿ ಚಿನ್ನದ ಬಣ್ಣ ಬರುವವರೆಗೆ ಹುರಿದುಕೊಳ್ಳಿ ನಂತರ ಇದಕ್ಕೆ ಹಸಿಮೆಣಸಿನ ಕಾಯಿ ಸ್ವಲ್ಪ ಉಪ್ಪು ಹಾಕಿ ಆಮ್ಲೆಟ್ ತಯಾರು ಮಾಡಿಕೊಳ್ಳಬೇಕು.
ಮತ್ತೆ ಒಲೆಯ ಮೇಲೆ ಪಾತ್ರೆಯೊಂದನ್ನು ಇಟ್ಟು ಬಿಸಿ ಮಾಡಿ ಎಣ್ಣೆ ಹಾಕಿ ಬಿಸಿ ಮಾಡಿಕೊಳ್ಳಬೇಕಿ. ಎಣ್ಣೆ ಬಿಸಿಯಾದ ನಂತರ ಸಾಸಿವೆ ಮತ್ತು ಕರಿಬೇವಿನ ಎಲೆ ಹಾಕಿ ಒಗ್ಗರಣೆ ಮಾಡಿಕೊಳ್ಳಬೇಕು. ಇದಕ್ಕೆ ಮತ್ತೆ ಸ್ವಲ್ಪ ಈರುಳ್ಳಿ ಹಾಕಿ ಕೆಂಪಗೆ ಮಾಡಿಕೊಳ್ಳಬೇಕು. ನಂತರ ಶುಂಠಿ, ಬೆಳ್ಳುಳ್ಳಿ ಪೇಸ್ಟ್ ಹಾಕಿ 1 ನಿಮಿಷ ಫ್ರೈ ಮಾಡಿಕೊಳ್ಳಿ.
ಇದಕ್ಕೆ ರುಬ್ಬಿಕೊಂಡ ಟೊಮೆಟೊ ಪ್ಯೂರಿ ಹಾಕಿ 5 ನಿಮಿಷಗಳ ಕಾಲ ಬಿಟ್ಟು ನಂತರ ಖಾರದ ಪುಡಿ, ದನಿಯಾ ಪುಡಿ, ಗರಂ ಮಸಾಲ, ಅರಿಶಿಣ ಹಾಕಿ 2 ನಿಮಿಷ ಫ್ರೈ ಮಾಡಿದ. ಈ ಮಿಶ್ರಣಕ್ಕೆ ತೆಂಗಿನ ಹಾಲು ಹಾಗೂ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಗ್ರೇವಿಯಾಗವವರೆಗೆ ಕುದಿಸಿ. ಇದಕ್ಕೆ ಈ ಮೊದಲೇ ಮಾಡಿಟ್ಟುಕೊಂಡಿದ್ದ ಆಮ್ಲೆಟ್ ನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿದರೆ ಆಮ್ಲೆಟ್ ಗ್ರೇವಿ ಸವಿಯಲು ಸಿದ್ಧವಾಗುತ್ತದೆ.