ಆಲೂಗಡ್ಡೆಯನ್ನು ಪ್ರೆಶರ್ ಕುಕ್ಕರ್ ನಲ್ಲಿ ಹಾಕಿ, ಸ್ವಲ್ಪ ಉಪ್ಪು ಮತ್ತು ಬೇಯಲು ತಕ್ಕ ನೀರು ಹಾಕಿ ಬೇಯಿಸಿ.
ಬೇಯಿಸಿದ ಆಲೂಗೆಡ್ಡೆಯ ಸಿಪ್ಪೆ ಸುಲಿದು ಚೆನ್ನಾಗಿ ಹಿಸುಕಬೇಕು, ಅದಕ್ಕೆ ರುಚಿಗೆ ತಕ್ಕ ಉಪ್ಪು, ಗರಂ ಮಸಾಲ, ಕತ್ತರಿಸಿದ ಹಸಿ ಮೆಣಸಿನ ಕಾಯಿ, ಕೊತ್ತಂಬರಿ ಸೊಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಬೇಕು.
ನಂತರ ಆಲೂ ಮಿಶ್ರಣದಿಂದ ಚಿಕ್ಕ-ಚಿಕ್ಕ ಉಂಡೆಗಳನ್ನು ಕಟ್ಟಿ.
ಈಗ ಮತ್ತೊಂದು ಪಾತ್ರೆಯಲ್ಲಿ ಮೈದಾ ಮತ್ತು ಕಡಲೆಹಿಟ್ಟು ಹಾಕಿ ಅದಕ್ಕೆ ರುಚಿಗೆ ತಕ್ಕ ಉಪ್ಪು ಹಾಕಿ ಮತ್ತು ನೀರು ಹಾಕಿ ಕಲೆಸಬೇಕು. ಮಿಶ್ರಣ ತುಂಬಾ ಗಟ್ಟಿಯಾಗಿರಬಾರದು, ನೀರು-ನೀರಾಗಿಯೂ ಇರಬಾರದು.
ಈಗ ಬಾಣಲೆಯಲ್ಲಿ ಅರ್ಧದಷ್ಟು ಎಣ್ಣೆ ಹಾಕಿ ಕಾಯಿಸಬೇಕು, ಆಲೂಗೆಡ್ಡೆ ಮಿಶ್ರಣದಿಂದ ಕಟ್ಟಿದ ಉಂಡೆಗಳನ್ನುಮೈದಾದಲ್ಲಿ ಅದ್ದಿ ಕುದಿಯುತ್ತಿರುವ ಎಣ್ಣೆಗೆ ಹಾಕಿ ಕಂದು ಬಣ್ಣ ಬರುವಾಗ ತೆಗೆದರೆ ರುಚಿಕರವಾದ ಅಲೂ ಬೋಂಡಾ ರೆಡಿ.