ಮಸಾಲೆ ಇಡ್ಲಿ

ರುಚಿಕರ ಮಸಾಲೆ ಇಡ್ಲಿ ಮಾಡುವ ವಿಧಾನ...
ಮಸಾಲೆ ಇಡ್ಲಿ
ಮಸಾಲೆ ಇಡ್ಲಿ
ಬೇಕಾಗುವ ಪದಾರ್ಥಗಳು...
  • ಇಡ್ಲಿ ಹಿಟ್ಟು - 2 ಬಟ್ಟಲು
  • ಕರಿಬೇವು- 5-6 ಎಳೆ
  • ಸಾಸಿವೆ - ಸ್ವಲ್ಪ
  • ಇಂಗು- ಚಿಟಿಕೆ
  • ಈರುಳ್ಳಿ-ಸಣ್ಣಗೆ ಹೆಚ್ಚಿದ್ದು
  • ಜೀರಿಗೆ- ಸ್ವಲ್ಪ
  • ಎಣ್ಣೆ - ಸ್ವಲ್ಪ
  • ಉಪ್ಪು - ರುಚಿಗೆ ತಕ್ಕಷ್ಟು
  • ಹಸಿಮೆಣಸಿನ ಕಾಯಿ - 4
  • ಕೊತ್ತಂಬರಿ ಸೊಪ್ಪು - ಸ್ವಲ್ಪ
ಮಾಡುವ ವಿಧಾನ...
  • ಮೊದಲು ಪ್ಯಾನ್ ಇಟ್ಟು ಅದಕ್ಕೆ ಸ್ವಲ್ಪ ಎಣ್ಣೆ ಹಾಕಿ ಬಿಸಿ ಮಾಡಬೇಕು. ನಂತರ ಸಾಸಿವೆ, ಜೀರಿಗೆ, ಇಂಗು, ಕರಿಬೇವಿನ ಸೊಪ್ಪು ಹಾಕಿ ಹುರಿದುಕೊಳ್ಳಬೇಕು. 
  • ನಂತರ ಹಸಿಮೆಣಸಿನ ಕಾಯಿ ಮತ್ತು ಈರುಳ್ಳಿಯನ್ನು ಹಾಕಿ ಚಿನ್ನದ ಬಣ್ಣ ಬರುವವರೆಗೂ ಹುರಿದುಕೊಳ್ಳಬೇಕು. 
  • ಹಿಟ್ಟು ತೆಗೆದುಕೊಂಡು ಅದಕ್ಕೆ ಈ ಒಗ್ಗರಣೆ, ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಬೇಕು. 
  • ಇಡ್ಲಿ ತಟ್ಟೆಗಳನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಎಣ್ಣೆಯನ್ನು ಸವರಿ ಹಿಟ್ಟನ್ನು ಹಾಕಿ ಹಬೆಯಲ್ಲಿ ಬೇಯಿಸಬೇಕು. ನಂತರ ಕೊತ್ತಂಬರಿ ಸೊಪ್ಪಿನೊಂದಿಗೆ ಅಲಂಕರಿಸಿದರೆ, ರುಚಿಕರವಾದ ಮಸಾಲೆ ಇಡ್ಲಿ ಸವಿಯಲು ಸಿದ್ಧ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com