ಕಡಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದುಕೊಂಡು, ಸಂಪೂರ್ಣವಾಗಿ ತಣ್ಣಗಾದ ಬಳಿಕ ಸಿಪ್ಪೆಯನ್ನು ತೆಗೆದಿಟ್ಟುಕೊಳ್ಳಬೇಕು.
ನಂತರ ಬಾಣಲೆಗೆ 1 ಚಮಚ ಎಣ್ಣೆ ಹಾಕಿ ಸಣ್ಣ ಉರಿಯಲ್ಲಿ ಕರಿಬೇವು ಹಾಕಿ ಕೆಂಪಗೆ ಹುರಿದುಕೊಳ್ಳಬೇಕು. ಬಳಿಕ ಅರಿಶಿಣದ ಪುಡಿ, ಅಚ್ಚ ಖಾರದ ಪುಡಿ, ಕಾಳು ಮೆಣಸಿನ ಪುಡಿ ಹಾಕಿ ಕೆಂಪಗೆ ಹುರಿದುಕೊಂಡು, ಇದಕ್ಕೆ ಹುರಿದಿಟ್ಟುಕೊಂಡ ಕಡಲೆಕಾಯಿ ಬೀಜ, ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು.
ನಂತರ ಅದನ್ನು ಒಂದು ಪಾತ್ರೆಗೆ ಹಾಕಿ ಈರುಳ್ಳಿ, ಟೊಮೆಟೋ, ಕ್ಯಾರೆಟ್ ತುರಿ, ಕೊತ್ತಂಬರಿ ಸೊಪ್ಪು, ನಿಂಬೆ ರಸ ಹಾಗೂ ಸ್ವಲ್ಪ ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಿದರೆ, ರುಚಿಕರವಾದ ಮಸಾಲೆ ಕಡಲೆಕಾಯಿ ಬೀಜದ ಚಾಟ್ ಸವಿಯಲು ಸಿದ್ಧ.