ಮೊದಲಿಗೆ ಮಿಕ್ಸಿ ಜಾರ್'ಗೆ ಗಸಗಸೆ, ಗೋಡಂಬಿ, ಹಸಿಮೆಣಸಿನ ಕಾಯಿ ಹಾಗೂ ಕಾಯಿತುರಿ ಹಾಕಿ ನುಣ್ಣಗೆ ರುಬ್ಬಿಟ್ಟುಕೊಳ್ಳಬೇಕು.
ನಂತರ ಬಾಣಲೆಗೆ ಸ್ವಲ್ಪ ಎಣ್ಣೆ ಹಾಕಿ, ಚಕ್ಕೆ, ಲವಂಗ, ಪಲಾವ್ ಎಲೆ, ಜೀರಿಗೆ ಹಾಗೂ ಈರುಳ್ಳಿ ಹಾಕಿ ಕೆಂಪಗೆ ಹುರಿದುಕೊಳ್ಳಬೇಕು. ಬಳಿಕ ಟೊಮೆಟೋವನ್ನೂ ಹಾಕಿ ಕೆಂಪಗೆ ಹುರಿದುಕೊಳ್ಳಬೇಕು.
ಬಳಿಕ ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಅರಿಶಿಣದ ಪುಡಿ, ಉಪ್ಪು, ದನಿಯಾ ಪುಡಿ, ಖಾರದ ಪುಡಿ, ಜೀರಿಗೆ ಪುಡಿ ಎಲ್ಲವನ್ನೂ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ 2-3 ನಿಮಿಷ ಕುದಿಯಲು ಬಿಡಿ.
ನಂತರ ಚೆನ್ನಾಗಿ ತೊಳೆದು ಕತ್ತರಿಸಿಕೊಂಡ ಅಣಬೆ ಹಾಗೂ ರುಬ್ಬಿಕೊಂಡ ಮಿಶ್ರಣ ಹಾಕಿ ಅಗತ್ಯವಿದ್ದಷ್ಟು ನೀರು ಹಾಕಿ 10-15 ನಿಮಿಷ ನೀರು ಹಾಕಿ ಕುದಿಯಲು ಬಿಡಿ.
ಪ್ಯಾನ್ ಒಂದಕ್ಕೆ ಸ್ವಲ್ಪ ತುಪ್ಪ ಹಾಕಿ ಕಾದ ನಂತರ ಗರಂ ಮಸಾಲಾ ಪುಡಿ ಹಾಗೂ ಕೊತ್ತಂಬರಿ ಸೊಪ್ಪು ಹಾಕಿ ಕುದಿಸಿ ಇದನ್ನು ಕುದಿಯುತ್ತಿರುವ ಮಸಾಲೆಗೆ ಹಾಕಿ ಮಿಶ್ರಣ ಮಾಡಿದರೆ, ರುಚಿಕರವಾದ ಮಶ್ರೂಮ್ ಮಾಸಾಲಾ ಸವಿಯಲು ಸಿದ್ಧ.