ಮೊಟ್ಟೆ ದೋಸೆ

ರುಚಿಕರವಾದ ಮೊಟ್ಟೆ ದೋಸೆ ಮಾಡುವ ವಿಧಾನ...

Published: 08th June 2021 11:53 AM  |   Last Updated: 08th June 2021 11:53 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : Online Desk

ಬೇಕಾಗುವ ಪದಾರ್ಥಗಳು

 • ಕೋಳಿ ಮೊಟ್ಟೆ- 2
 • ಹಸಿಮೆಣಸಿನ ಕಾಯಿ - 2
 • ಈರುಳ್ಳಿ- 1 
 • ಕೊತ್ತಂಬರಿ ಸೊಪ್ಪು- ಸ್ವಲ್ಪ
 • ಕಾಳುಮೆಣಸಿನ ಪುಡಿ - ಸ್ವಲ್ಪ
 • ಎಣ್ಣೆ- ಅಗತ್ಯಕ್ಕೆ ತಕ್ಕಷ್ಟು
 • ಉಪ್ಪು-ರುಚಿಗೆ ತಕ್ಕಷ್ಟು

ಮಾಡುವ ವಿಧಾನ...

 • ಮೊದಲಿಗೆ ಈರುಳ್ಳಿ, ಕೊತ್ತಂಬರಿ ಸೊಪ್ಪು ಹಾಗೂ ಹಸಿಮೆಣಸಿನ ಕಾಯಿಯನ್ನು ಸಣ್ಣಗೆ ಕತ್ತರಿಸಿಟ್ಟುಕೊಳ್ಳಬೇಕು.
 • ನಂತರ ಒಂದು ಬಾಣಲೆಗೆ 2-3 ಚಮಚ ಎಣ್ಣೆಯನ್ನು ಹಾಕಿ, ಈರುಳ್ಳಿ ಹಾಗೂ ಹಸಿಮೆಣಸಿನ ಕಾಯಿಯನ್ನು ಕೆಂಪಗೆ ಹುರಿದುಕೊಳ್ಳಬೇಕು. ನಂತರ ಇದಕ್ಕೆ ಕೊತ್ತಂಬರಿ ಸೊಪ್ಪು, ಉಪ್ಪು, ಕಾಳು ಮೆಣಸಿನ ಪುಡಿನ್ನು ಸೇರಿಸಿ ತಣ್ಣಗಾಗಲು ಬಿಡಿ.
 • ತಣ್ಣಗಾದ ಬಳಿಕ ಮೊಟ್ಟೆಯನ್ನು ಒಡೆದು ಇದಕ್ಕೆ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ.
 • ಒಲೆಯ ಮೇಲೆ ತವಾ ಇಟ್ಟು ಒಂದು ಚಮಚ ಎಣ್ಣೆಯನ್ನು ಹಾಕಿ ಮಸಾಲೆ ಮಿಶ್ರಿತ ಮೊಟ್ಟೆಯನ್ನು ಹಾಕಿ ಎರಡೂ ಬದಿಯಲ್ಲೂ ಕೆಂಪಗೆ ಸುಟ್ಟರೆ ರುಚಿಕರವಾದ ಮೊಟ್ಟೆ ದೋಸೆ ಸವಿಯಲು ಸಿದ್ಧ.
   

Stay up to date on all the latest ಆಹಾರ-ವಿಹಾರ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp