ಮಟನ್ ಕರಿ

ರುಚಿಕರವಾದ ಮಟನ್ ಕರಿ ಮಾಡುವ ವಿಧಾನ...
ಮಟನ್ ಕರಿ
ಮಟನ್ ಕರಿ

ಬೇಕಾಗುವ ಪದಾರ್ಥಗಳು

  • ಈರುಳ್ಳಿ – 2
  • ಟೊಮೆಟೊ – 2
  • ಶುಂಠಿ–ಬೆಳ್ಳುಳ್ಳಿ ಪೇಸ್ಟ್ – 3 ಚಮಚ
  • ಗರಂಮಸಾಲೆ – 2 ಚಮಚ
  • ದನಿಯಾ ಪುಡಿ – 2 ಚಮಚ
  • ಜೀರಿಗೆ ಪುಡಿ – 1 ಚಮಚ
  • ಅರಿಸಿಶಿ – ಅರ್ಧ ಚಮಚ
  • ಖಾರದಪುಡಿ – ಅರ್ಧ ಚಮಚ
  • ಕುರಿ ಮಾಂಸ – ಅರ್ಧ ಕೆ.ಜಿ
  • ಉಪ್ಪು – ರುಚಿಗೆ ತಕ್ಕಷ್ಟು
  • ಎಣ್ಣೆ– ಸ್ವಲ್ಪ
  • ಕೊತ್ತಂಬರಿ ಸೊಪ್ಪು- ಸ್ವಲ್ಪ

ಮಾಡುವ ವಿಧಾನ...

  • ಪಾತ್ರೆಯೊಂದನ್ನು ಒಲೆಯ ಮೇಲಿದ್ದು ಎಣ್ಣೆ ಹಾಕಿ ಮಧ್ಯಮ ಉರಿಯಲ್ಲಿ ಬಿಸಿ ಮಾಡಿ. ನಂತರ ಈರುಳ್ಳಿ ಹಾಕಿ ಬಣ್ಣ ಬದಲಾಗುವವರೆಗೂ ಹುರಿಯಿರಿ. ಈರುಳ್ಳಿಯನ್ನು ತೆಗೆದಿಟ್ಟುಕೊಳ್ಳಿ.
  • ತಣ್ಣದಾಗ ಮೇಲೆ ಮಿಕ್ಸಿಗೆ ಈರುಳ್ಳಿ ಹಾಗೂ ಸ್ವಲ್ಪ ನೀರು ಸೇರಿಸಿ ನುಣ್ಣಗೆ ರುಬ್ಬಿಕೊಳ್ಳಿ. ಅದನ್ನು ತೆಗೆದಿರಿಸಿ ಮಿಕ್ಸಿ ಜಾರಿಗೆ ಟೊಮೆಟೊ, ಶುಂಠಿ–ಬೆಳ್ಳುಳ್ಳಿ ಪೇಸ್ಟ್ ಸೇರಿಸಿ ರುಬ್ಬಿಕೊಳ್ಳಿ. ಮತ್ತೆ ಪ್ಯಾನ್ ಬಿಸಿ ಮಾಡಿ ಅದಕ್ಕೆ ರುಬ್ಬಿಕೊಂಡ ಈರುಳ್ಳಿ ಪೇಸ್ಟ್ ಹಾಕಿ 2 ರಿಂದ 3 ನಿಮಿಷ ಹುರಿದುಕೊಳ್ಳಿ.
  • ನಂತರ ರುಬ್ಬಿಕೊಂಡ ಪೇಸ್ಟ್, ಗರಂಮಸಾಲೆ, ಕೊತ್ತಂಬರಿ ಪುಡಿ, ಜೀರಿಗೆ ಪುಡಿ, ಅರಿಶಿಣದ ಪುಡಿ, ಖಾರದಪುಡಿ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ, ಎಣ್ಣೆ ಬಿಡುವವರೆಗೂ ಕುದಿಸಿ.
  • ಕುರಿ ಮಾಂಸವನ್ನು ಈ ಮಿಶ್ರಣಕ್ಕೆ ಸೇರಿಸಿ ರುಚಿಗೆ ತಕ್ಕಷ್ಟು ಉಪ್ಪು ಹಾಕಿ. ಮಸಾಲೆ ಹೋಳುಗಳಿಗೆ ಹಿಡಿಯುವವರೆಗೆ ಕೈಯಾಡಿಸಿ. ನಂತರ ಅರ್ಧ ಕಪ್ ನೀರು ಹಾಕಿ ಮತ್ತೆ ಎಲ್ಲವನ್ನೂ ಮಿಶ್ರಣ ಮಾಡಿ ಸಣ್ಣ ಉರಿಯಲ್ಲಿ ಕುರಿ ಮಾಂಸ ಬೇಯುವವರೆಗೆ ಬೇಯಿಸಿ. ಚೆನ್ನಾಗಿ ಕುದಿದು, ಮಾಂಸ ಬೆಂದು ಮಂದ ಆಗುವವರೆಗೂ ಕುದಿಸಿ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com