ಅಕ್ಕಿ ಪಾಯಸ

ರುಚಿಕರವಾದ ಅಕ್ಕಿ ಪಾಯಸ ಮಾಡುವ ವಿಧಾನ...
ಅಕ್ಕಿ ಪಾಯಸ
ಅಕ್ಕಿ ಪಾಯಸ

ಬೇಕಾಗುವ ಪದಾರ್ಥಗಳು...

  • ಹಾಲು– 1 ಲೀಟರ್
  • ತೊಳೆದು ನೆನೆಸಿದ ಅಕ್ಕಿ – ಅರ್ಧ ಬಟ್ಟಲು
  • ಸಕ್ಕರೆ– ಅರ್ಧ ಬಟ್ಟಲು
  • ಏಲಕ್ಕಿ ಪುಡಿ– ಅರ್ಧ ಚಮಚ
  • ಕೇಸರಿ ದಳಗಳು– ಚಿಟಿಕೆ
  • ಕತ್ತರಿಸಿದ ಬಾದಾಮಿ – 2 ಚಮಚ
  • ಕತ್ತರಿಸಿದ ಪಿಸ್ತಾ – 2 ಚಮಚ

ಮಾಡುವ ವಿಧಾನ...

  • ಮೊದಲಿಗೆ ತಳವಿರುವ ಪ್ಯಾನ್‌ನಲ್ಲಿ ಹಾಲನ್ನು ಕಡಿಮೆ ಉರಿಯಲ್ಲಿ ಕುದಿಸಿಕೊಳ್ಳಿ.
  • ತೊಳೆದು ನೆನೆಸಿದ ಅಕ್ಕಿಯನ್ನು ಹಾಲಿಗೆ ಸೇರಿಸಿ, ಅಕ್ಕಿ ಮೃದುವಾಗುವವರೆಗೆ ಮತ್ತು ಹಾಲು ದಪ್ಪವಾಗುವವರೆಗೆ ಬೇಯಿಸಿ.
  • ಹಾಲಿನ ಮಿಶ್ರಣಕ್ಕೆ ಸಕ್ಕರೆ, ಏಲಕ್ಕಿ ಪುಡಿ, ಚಿಟಿಕೆ ಕೇಸರಿ ಸೇರಿಸಿ ಚೆನ್ನಾಗಿ ಬೆರೆಸಿ.
  • ಸಕ್ಕರೆ ಕರಗುವವರೆಗೆ ಕಡಿಮೆ ಉರಿಯಲ್ಲಿ ಬೇಯಿಸುವುದನ್ನು ಮುಂದುವರಿಸಿ.
  • ಬಳಿಕ ಉರಿಯನ್ನು ಆಫ್ ಮಾಡಿ, ತಣ್ಣಗಾಗಲು ಬಿಡಿ.
  • ನಂತರ ಅದನ್ನು ಫ್ರಿಜ್‌ನಲ್ಲಿ 1-2 ಗಂಟೆ ಇಡಿ. ನಂತರ ಬಾದಾಮಿ ಹಾಗೂ ಪಿಸ್ತಾದಿಂದ ಅಲಂಕರಿಸಿದರೆ ರುಚಿಕರವಾದ ಅಕ್ಕಿ ಪಾಯಸ ಸವಿಯಲು ಸಿದ್ಧ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com