ಮೊದಲು ಬಾಳೆಕಾಯಿ ಬೇಯಿಸಿ, ಸಿಪ್ಪೆ ತೆಗೆಯಿರಿ. ಒಂದು ಬಟ್ಟಲಿಗೆ ಹಾಕಿ ನುಣ್ಣಗೆ ಮಾಡಿಕೊಳ್ಳಿ. ಮತ್ತೊಂದೆಡೆ ಹಸಿ ಮೆಣಸಿನಕಾಯಿ, ಶುಂಠಿ ಮತ್ತು ಬಟಾಣಿಗಳನ್ನು ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ. ಈಗ ಈ ಮಿಶ್ರಣವನ್ನು ಬೇಯಿಸಿದ ಬಾಳೆಕಾಯಿಗೆ ಹಾಕಿ ಮಿಶ್ರಣ ಮಾಡಿಕೊಳ್ಳಿ.
ಇದಕ್ಕೆ ಹಿಂಗು, ಕೆಂಪು ಮೆಣಸಿನ ಪುಡಿ, ಗರಂ ಮಸಾಲ ಪುಡಿ, ಆಮ್ಚೂರ್ ಪುಡಿ ಮತ್ತು ಉಪ್ಪು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ.
ಬಾಣಲೆಗೆ ಎಣ್ಣೆ ಹಾಕಿ ಬಿಸಿ ಮಾಡಿಕೊಳ್ಳಿ. ಎಣ್ಣೆ ಬಿಸಿಯಾಗುತ್ತಿದ್ದಂತೆ ಮಿಶ್ರಣವನ್ನು ಸಣ್ಣ ಉಂಡೆ ಮಾಡಿ, ಸ್ವಲ್ಪ ಪುಡಿ ಮಾಡಿದ ಶಾವಿಗೆಯಲ್ಲಿ ಅದ್ದಿ, ಎಣ್ಣೆಗೆ ಹಾಕಿ ಬಂಗಾರದ ಬಣ್ಣಕ್ಕೆ ಬರುವರೆಗೆ ಕರಿಯಿರಿ. ಇದೀಗ ರುಚಿಕರವಾದ ಬಾಳೆಕಾಯಿ ಟಿಕ್ಕಾ ಸವಿಯಲು ಸಿದ್ಧ.