ಮೊದಲು ಮಿಕ್ಸಿಂಗ್ ಬೌಲ್ ಅನ್ನು ತೆಗೆದುಕೊಂಡು, ಬೇಯಿಸಿದ ಆಲೂಗಡ್ಡೆಯನ್ನು ಸೇರಿಸಿ ಮತ್ತು ನುಣ್ಣಹೆ ಮಾಡಿಕೊಳ್ಳಿ.
ನುಣ್ಣಗೆ ಮಾಡಿಕೊಂಡ ಆಲೂಗಡ್ಡೆ ಬೇಯಿಸಿಕೊಂಡ ಚಿಕನ್, ಗರಂ ಮಸಾಲಾ, ಉಪ್ಪು, ಹುರಿದ ಜೀರಾ ಪುಡಿ, ಕಾಳು ಮೆಣಸಿನ ಪುಡಿ, ಹಸಿರು ಮೆಣಸಿನಕಾಯಿ, ಶುಂಠಿ ಬೆಳ್ಳುಳ್ಳಿ ಪೇಸ್ಟ್, ಪುದೀನಾ, ಸೋಯಾ ಸಾಸ್ ಮತ್ತು ಕೊತ್ತಂಬರಿ ಸೊಪ್ಪು ಸೇರಿಸಿ ಮಿಶ್ರಣ ಮಾಡಿಕೊಳ್ಳಿ.
ನಂತರ ಈ ಮಿಶ್ರಣವನ್ನು 10-15 ನಿಮಿಷಗಳ ಕಾಲ ಫ್ರಿಜ್‍ನಲ್ಲಿಡಿ.
ನಂತರ ಫ್ರಿಜ್‍ನಲ್ಲಿದ್ದ ಮಿಶ್ರಣವನ್ನು ವಡೆಯ ರೀತಿ ತಟ್ಟಿ ಅದನ್ನು ಮೊಟ್ಟೆಯಲ್ಲಿ ಅದ್ದಿ, ನಂತರ ಬ್ರೆಡ್ ಕ್ರಂಬ್ಸ್ ನಲ್ಲಿ ಅದ್ದಿ, ಎಣ್ಣೆಯಲ್ಲಿ ಡೀಪ್ ಫ್ರೈ ಮಾಡಿದರೆ ರುಚಿಕರವಾದ ಆಲೂ ಚಿಕನ್ ಕಬಾಬ್ ಸವಿಯಲು ಸಿದ್ಧ.