ಮಾವಿನಕಾಯಿಯನ್ನು ತೊಳೆದು ಸಿಪ್ಪೆ ತೆಗೆಯಿರಿ. ಸಿಪ್ಪೆ ತೆಗೆದ ಮಾವಿನಕಾಯಿಯನ್ನು ತುರಿದುಕೊಳ್ಳಿ
ಒಲೆಯ ಮೇಲೆ ಒಂದು ಪ್ಯಾನ್ ಇಟ್ಟು ಅದಕ್ಕೆ 1 ಟೀ ಸ್ಪೂನ್ ಎಣ್ಣೆ ಹಾಕಿ. ಅದು ಬಿಸಿಯಾಗುತ್ತಲೆ ಅದಕ್ಕೆ ಕಡಲೆಬೇಳೆ, ಉದ್ದಿನಬೇಳೆ, ಮೆಂತ್ಯೆ ಕಾಳು ಹಾಕಿ ಹುರಿಯಿರಿ. ನಂತರ ಒಣ ಮೆಣಸಿನ ಕಾಯಿ ಹಾಕಿ ಫ್ರೈ ಮಾಡಿ. ನಂತರ ಇದು ತಣ್ಣಗಾಗಲು ಬಿಡಿ.
ನಂತರ ಇದನ್ನು ಒಂದು ಮಿಕ್ಸಿ ಜಾರಿಗೆ ಹಾಕಿ. ಅದಕ್ಕೆ ಜೀರಿಗೆ, ಬೆಳ್ಳುಳ್ಳಿ, ಮಾವಿನಕಾಯಿ, ಉಪ್ಪು, ತೆಂಗಿನ ತುರಿ ಹಾಗೂ ಸ್ವಲ್ಪ ಬೆಲ್ಲ ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿ.
ನಂತರ ಒಂದು ಒಗ್ಗರಣೆ ಪಾತ್ರೆಗೆ ಎಣ್ಣೆ ಹಾಕಿ ಅದಕ್ಕೆ ಸಾಸಿವೆ, ಇಂಗು, 2 ಒಣಮೆಣಸು, ಕರಿಬೇವು ಹಾಕಿ. ಅದು ಕೆಂಪಗಾದಾಗ ರುಬ್ಬಿಕೊಂಡ ಚಟ್ನಿಗೆ ಹಾಕಿ, ಕಡಿಮೆ ಉರಿಯಲ್ಲಿ 5 ನಿಮಿಷಗಳ ಕಾಲ ಬೇಯಿಸಿಕೊಂಡರೆ ರುಚಿಕರವಾದ ಮಾವಿನ ಚಟ್ನಿ ಸವಿಯಲು ಸಿದ್ಧ.