ಅಡುಗೆ

ಪನ್ನೀರ್ ಬುರ್ಜಿ- Paneer bhurji recipe in Kannada

ರುಚಿಕರವಾದ ಪನ್ನೀರ್ ಬುರ್ಜಿ ಮಾಡುವ ವಿಧಾನ...

ಪನ್ನೀರ್ ಬುರ್ಜಿ- Paneer bhurji recipe in Kannada
ಪನ್ನೀರ್ ಬುರ್ಜಿ
Published On :

ಬೇಕಾಗುವ ಪದಾರ್ಥಗಳು...

  • ಎಣ್ಣೆ- 2 ಚಮಚ

  • ಜೀರಿಗೆ- 1 ಚಮಚ

  • ಈರುಳ್ಳಿ- 1 ಸಣ್ಣಗೆ ಹೆಚ್ಚಿದ್ದು

  • ಉಪ್ಪು- ರುಚಿಗೆ ತಕ್ಕಷ್ಟು

  • ಹಸಿಮೆಣಸಿನಕಾಯಿ- 1 ಸಣ್ಣಗೆ ಹೆಚ್ಚಿದ್ದು

  • ಶುಂಠಿ-ಬೆಳ್ಳುಳ್ಳಿ ಪೇಸ್ಟ್- 1 ಚಮಚ

  • ಅಚ್ಚಖಾರದ ಪುಡಿ- ಅರ್ಧ ಚಮಚ

  • ಟೊಮೆಟೋ- 1 ಸಣ್ಣಗೆ ಹೆಚ್ಚಿದ್ದು

  • ಅರಿಶಿನ- ಸ್ವಲ್ಪ

  • ಗರಂ ಮಸಾಲಾ- ಅರ್ಧ ಚಮಚ

  • ಪನೀರ್- 2 ಕಪ್ ನಷ್ಟು ಸಣ್ಣಗೆ ಪುಡಿಪುಡಿ ಮಾಡಿದ್ದು

  • ಕಸೂರಿ ಮೇಥಿ- 1 ಚಮಚ

  • ಕೊತ್ತಂಬರಿ ಸೊಪ್ಪು- ಸ್ವಲ್ಪ

ಮಾಡುವ ವಿಧಾನ...

  • ದೊಡ್ಡ ಬಾಣಲೆ ತೆಗೆದುಕೊಂಡು ಎಣ್ಣೆ ಬಿಸಿ ಮಾಡಿಕೊಳ್ಳಿ. ಅದಕ್ಕೆ ಜೀರಿಗೆ ಹಾಕಿ. ಅದು ಚಟಪಟ ಅಂದಮೇಲೆ ಹೆಚ್ಚಿದ ಈರುಳ್ಳಿ, ಹಸಿಮೆಣಸು ಮತ್ತು ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಕಿ ಈರುಳ್ಳಿ ಸ್ವಲ್ಪ ಕೆಂಪಗಾಗುವವರೆಗೆ ಹುರಿಯಿರಿ.

  • ನಂತರ ಹೆಚ್ಚಿದ ಟೊಮೆಟೋ ಹಾಕಿ ಅದು ಮೆತ್ತಗಾಗುವವರೆಗೆ ಕೈಯ್ಯಾಡಿಸಿ. ನಂತರ ಅಚ್ಚಖಾರದ ಪುಡಿ, ಅರಿಶಿನ, ಗರಂ ಮಸಾಲಾ ಹಾಗೂ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಬಳಿಕ ಇದನ್ನು ಸಣ್ಣ ಉರಿಯಲ್ಲಿ 1 ನಿಮಿಷ ಹಾಗೇ ಮಸಾಲೆಯನ್ನು ಹುರಿಯಿರಿ.

  • ನಂತರ ಪುಡಿ ಮಾಡಿಟ್ಟುಕೊಂಡ ಪನೀರ್ ಹಾಕಿ. ಪನೀರ್ ಪೂರ್ತಿ ಮೆತ್ತಗಾಗಿ ಹೋಗದಂತೆ ನಿಧಾನವಾಗಿ ಕೈಯ್ಯಾಡಿಸಿ. ಸಣ್ಣ ಉರಿಯಲ್ಲಿ ಸುಮಾರು 3 ನಿಮಿಷ ಬಿಡಿ. ನಂತರ ಕಸೂರಿ ಮೇಥಿ ಮತ್ತು ಹೆಚ್ಚಿದ ಕೊತ್ತಂಬರಿ ಸೊಪ್ಪನ್ನು ಹಾಕಿ ಮಿಶ್ರಣ ಮಾಡಿದರೆ ರುಚಿಕರವಾದ ಪನೀರ್ ಬುರ್ಜಿ ಸವಿಯಲು ಸಿದ್ಧ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.