
ಬೇಕಾಗುವ ಪದಾರ್ಥಗಳು...
ಎಣ್ಣೆ- ಸ್ವಲ್ಪ
ಜೀರಿಗೆ- ಸ್ವಲ್ಪ
ಸಾಸಿವೆ- ಸ್ವಲ್ಪ
ಕರಿಬೇವು- ಸ್ವಲ್ಪ
ಈರುಳ್ಳಿ - 4
ಟೊಮೆಟೋ- 1
ಅರಶಿಣ ಪುಡಿ- ಸ್ವಲ್ಪ
ಹಸಿ ಮೆಣಸಿನಕಾಯಿ- 5
ಕೊತ್ತಂಬರಿ ಸೊಪ್ಪು- ಸ್ವಲ್ಪ
ತೆಂಗಿನ ತುರಿ- ಸ್ವಲ್ಪ
ಉಪ್ಪು- ರುಚಿಗೆ ತಕ್ಕಷ್ಟು
ಮಾಡುವ ವಿಧಾನ...
ಮೊದಲು ಬಾಣಲೆಗೆ ಎಣ್ಣೆ ಹಾಕಿಕೊಡು ಬಿಸಿ ಮಾಡಿಕೊಳ್ಳಿ. ನಂತರ ಇದಕ್ಕೆ ಸಾಸಿವೆ, ಜೀರಿಗೆ ಹಾಕಿ ನಂತರ ಕರಿಬೇವು ಹಾಕಿ ಕೆಂಪಗೆ ಮಾಡಿಕೊಳ್ಳಿ. ನಂತರ ಸಣ್ಣದಾಗಿ ಸ್ಲೈಸ್ ಮಾಡಿಕೊಂಡಿರುವ ಈರುಳ್ಳಿ, ಟೊಮೆಟೋ, ಹಸಿಮೆಣಸಿನ ಕಾಯಿ, ಉಪ್ಪು ಹಾಕಿ 2 ನಿಮಿಷ ಫ್ರೈ ಮಾಡಿಕೊಳ್ಳಿ.
ಬಳಿಕ ಅರಶಿನ ಪುಡಿ ಕೂಡ ಹಾಕಿಕೊಂಡು ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ. ತಳ ಹಿಡಿಯದಂತೆ ಕೈಯಾಡಿಸುತ್ತಿರಿ. 2 ರಿಂದ 3 ನಿಮಿಷ ಫ್ರೈ ಮಾಡಿಕೊಳ್ಳಬೇಕು.
3 ನಿಮಿಷದ ಬಳಿಕ ಸಣ್ಣದಾಗಿ ಹೆಚ್ಚಿಕೊಂಡಿರುವ ಕೊತ್ತಂಬರಿ ಸೊಪ್ಪು ಹಾಗೂ ತೆಂಗಿನ ತುರಿ ಹಾಕಿ ಮಿಶ್ರಣ ಮಾಡಿದರೆ ಈರುಳ್ಳಿ ಪಲ್ಯ ಸವಿಯಲು ಸಿದ್ಧ.
Advertisement