

ಬೇಕಾಗುವ ಪದಾರ್ಥಗಳು...
ಮೊಸರು – 1 ಬಟ್ಟಲು
ನೀರು – 2 ಬಟ್ಟಲು
ಉಪ್ಪು – ರುಚಿಗೆ ತಕ್ಕಷ್ಟು
ಜೀರಿಗೆ ಪುಡಿ – ½ ಚಮಚ
ಶುಂಠಿ (ತುರಿದದ್ದು) – ½ ಚಮಚ
ಕರಿಬೇವು – ಸ್ವಲ್ಪ
ಕೊತ್ತಂಬರಿ ಸೊಪ್ಪು – ಸ್ವಲ್ಪ
ಹಸಿಮೆಣಸಿನಕಾಯಿ – 1
ಮಾಡುವ ವಿಧಾನ...
ಒಂದು ಬಟ್ಟಲಿನಲ್ಲಿ ಮೊಸರು ಹಾಗೂ ನೀರನ್ನು ಮಿಕ್ಸಿ ಜಾರ್‌ಗೆ ಹಾಕಿಕೊಳ್ಳಿ, ಚೆನ್ನಾಗಿ ಗ್ರೈಂಡ್ ಮಾಡಿ. ಮಜ್ಜಿಗೆ ಸಿದ್ಧಪಿಡಿಸಿಕೊಂಡು ಒಂದು ಪಾತ್ರೆಗೆ ಹಾಕಿಕೊಳ್ಳಿ.
ನಂತರ ಅದಕ್ಕೆ ಉಪ್ಪು, ಜೀರಿಗೆ ಪುಡಿ, ಸಣ್ಣಗೆ ಕತ್ತರಿಸಿಕೊಂಡ ಶುಂಠಿ, ಹಸಿಮೆಣಸಿನಕಾಯಿ, ಕರಿಬೇವು, ಕೊತ್ತಂಬರಿ ಸೊಪ್ಪು ಹಾಕಿ ಮಿಶ್ರಣ ಮಾಡಿದರೆ, ರುಚಿಕರವಾದ ಮಾಸಾಲಾ ಮಜ್ಜಿಗೆ ಸವಿಯಲು ಸಿದ್ಧ.
Advertisement