Bigg Update: ವಾಟ್ಸಪ್ ನಿಂದ ವಿಡಿಯೊ ಕಾಲ್ ವೇಳೆ ಸ್ಕ್ರೀನ್ ಶೇರಿಂಗ್ ಫೀಚರ್ ಪರಿಚಯ

ವಾಟ್ಸಪ್ ಕುರಿತು ಅದರ ಮಾತೃ ಸಂಸ್ಥೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದು, ವಾಟ್ಸಪ್ ನೂತನ ಅಪ್ ಡೇಟ್ ನಲ್ಲಿ ವಿಡಿಯೊ ಕಾಲ್ ವೇಳೆ ಸ್ಕ್ರೀನ್ ಶೇರಿಂಗ್ ಫೀಚರ್ ಪರಿಚಯಿಸಿದೆ.
ವಿಡಿಯೊ ಕಾಲ್ ವೇಳೆ ಸ್ಕ್ರೀನ್ ಶೇರಿಂಗ್
ವಿಡಿಯೊ ಕಾಲ್ ವೇಳೆ ಸ್ಕ್ರೀನ್ ಶೇರಿಂಗ್

ನವದೆಹಲಿ: ವಾಟ್ಸಪ್ ಕುರಿತು ಅದರ ಮಾತೃ ಸಂಸ್ಥೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದು, ವಾಟ್ಸಪ್ ನೂತನ ಅಪ್ ಡೇಟ್ ನಲ್ಲಿ ವಿಡಿಯೊ ಕಾಲ್ ವೇಳೆ ಸ್ಕ್ರೀನ್ ಶೇರಿಂಗ್ ಫೀಚರ್ ಪರಿಚಯಿಸಿದೆ.

ವಾಟ್ಸಪ್ ನಲ್ಲಿ ವಿಡಿಯೊ ಕಾಲ್ ವೇಳೆ ಸ್ಕ್ರೀನ್ ಶೇರಿಂಗ್ ಫೀಚರ್ ಸಕ್ರಿಯಗೊಳಿಸಲಾಗಿದೆ ಎಂದು ಮೆಟಾ ಸಂಸ್ಥಾಪಕ ಮತ್ತು ಸಿಇಒ ಮಾರ್ಕ್ ಜುಕರ್‌ಬರ್ಗ್ ಮಂಗಳವಾರ ಹೇಳಿದ್ದಾರೆ.

ವಿಡಿಯೊ ಕಾಲ್ ವೇಳೆ ಬಳಕೆದಾರರು, 'ಶೇರಿಂಗ್' ಐಕಾನ್ ಅನ್ನು ಕ್ಲಿಕ್ ಮಾಡುವ ಮೂಲಕ ನಿರ್ದಿಷ್ಟ ಅಪ್ಲಿಕೇಶನ್ ಅಥವಾ ಸಂಪೂರ್ಣ ಪರದೆಯನ್ನು ಹಂಚಿಕೊಳ್ಳುವ ಆಯ್ಕೆ ಮಾಡುವ ಮೂಲಕ ಸ್ಕ್ರೀನ್ ಹಂಚಿಕೆಯನ್ನು ಪ್ರಾರಂಭಿಸಬಹುದು. ಕೆಲಸದ ನಿಮಿತ್ತ ಡಾಕ್ಯುಮೆಂಟ್‌ಗಳನ್ನು ಹಂಚಿಕೊಳ್ಳುವುದು, ಕುಟುಂಬದೊಂದಿಗೆ ಚಿತ್ರಗಳನ್ನು ಹಂಚಿಕೊಳ್ಳುವುದು, ರಜೆ ಕುರಿತು ಯೋಜಿಸುವುದು ಅಥವಾ ಸ್ನೇಹಿತರೊಂದಿಗೆ ಆನ್‌ಲೈನ್‌ನಲ್ಲಿ ಶಾಪಿಂಗ್ ಮಾಡುವುದು ಮುಂತಾದ ಸಂದರ್ಭ ವಿಡಿಯೊ ಕರೆ ಸಮಯದಲ್ಲಿ ನಿಮ್ಮ ಪರದೆಯ ಲೈವ್ ವೀಕ್ಷಣೆಯನ್ನು ಹಂಚಿಕೊಳ್ಳಲು ಸ್ಕ್ರೀನ್ ಶೇರಿಂಗ್ ಫೀಚರ್ ನಿಮಗೆ ಅನುಮತಿಸುತ್ತದೆ’ ಎಂದು ಕಂಪನಿಯು ಹೇಳಿಕೆಯಲ್ಲಿ ತಿಳಿಸಿದೆ.

WhatsApp ಬಳಕೆದಾರರು ಸ್ಮಾರ್ಟ್‌ಫೋನ್‌ಗಳಲ್ಲಿ ವಿಶಾಲವಾದ ಮತ್ತು ಮತ್ತಷ್ಟು ಉತ್ತಮ ಅನುಭವಕ್ಕಾಗಿ ಲ್ಯಾಂಡ್‌ಸ್ಕೇಪ್ ಮೋಡ್‌ನಲ್ಲಿ ವಿಡಿಯೊ ಕರೆಗಳನ್ನು ಮಾಡಬಹುದು. ನವೆಂಬರ್ 2016ರಿಂದ ಎಲ್ಲ ಬಳಕೆದಾರರಿಗೆ ವಾಟ್ಸಪ್ ವಿಡಿಯೊ ಕರೆ ಫೀಚರ್ ಅನ್ನು ಪರಿಚಯಿಸಿತ್ತು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com