
ಬೆಂಗಳೂರು: ರಾಜ್ಯದಲ್ಲಿ ಎಚ್1ಎನ್1 ಮಹಾ ಮಾರಿ ನಿಯಂತ್ರಣಕ್ಕೆ ಬರುತ್ತಿಲ್ಲ. ಬುಧವಾರ ಮತ್ತೆ ರಾಜ್ಯಾದಂತ 33 ಜನರಿಗೆ ಜ್ವರ ತಗುಲಿರುವುದು ಪತ್ತೆಯಾಗಿದೆ. ಆರೋಗ್ಯ ಇಲಾಖೆಯು ಎಚ್1ಎನ್1 ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದೆಯಾದರೂ ರೋಗ ನಿಯಂತ್ರಣಕ್ಕೆ ಬಾರದಿರುವುದು ಆತಂಕ ಮೂಡಿಸಿದೆ.
ಇದುವರೆಗೂ ರಾಜ್ಯಾದ್ಯಂತ ಒಟ್ಟು 536 ಪ್ರಕರಣಗಳಲ್ಲಿ ಸೋಂಕು ತಗುಲಿರುವ ಶಂಕೆಯಿದೆ. ಈ ಪೈಕಿ 144 ಜನರಿಗೆ ಸೋಂಕು ತಗುಲಿರುವುದು ಖಚಿತವಾಗಿದ್ದು, ಹತ್ತು ಮಂದಿ ಮೃತಪಟ್ಟಿದ್ದಾರೆ. 75 ಜನರು ಜ್ವರದಿಂದ ಗುಣಮುಖರಾಗಿದ್ದಾರೆ. 14 ಜನರು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿನ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇಶಾದ್ಯಂತ 214 ಮಂದಿ ಎಚ್1ಎನ್1ನಿಂದ ಸತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ರೋಗದ ನಿಯಂತ್ರಣಕ್ಕೆ ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದಿದೆ.
Advertisement