ಹಂದಿಜ್ವರ: ಸತ್ತವರ ಸಂಖ್ಯೆ 24ಕ್ಕೆ ಏರಿಕೆ

ರಾಜ್ಯದಲ್ಲಿ ಎಚ್1ಎನ್1 ಮಹಾಮಾರಿ ಸದ್ದಿಲ್ಲದೆ ಸಾವು ಬಯಸುತ್ತಿದೆ. ಕಳೆದ ಎರಡು ತಿಂಗಳಲ್ಲಿ ಈ ಮಹಾಮಾರಿಗೆ ರಾಜ್ಯದಲ್ಲಿ ಬಲಿಯಾದವರ ಸಂಖ್ಯೆ 24ಕ್ಕೇರಿದೆ...
ಹಂದಿಜ್ವರ: ಸತ್ತವರ ಸಂಖ್ಯೆ 24ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಎಚ್1ಎನ್1 ಮಹಾಮಾರಿ ಸದ್ದಿಲ್ಲದೆ ಸಾವು ಬಯಸುತ್ತಿದೆ. ಕಳೆದ ಎರಡು ತಿಂಗಳಲ್ಲಿ ಈ ಮಹಾಮಾರಿಗೆ ರಾಜ್ಯದಲ್ಲಿ ಬಲಿಯಾದವರ ಸಂಖ್ಯೆ 24ಕ್ಕೇರಿದೆ.

ಎಚ್1ಎನ್1 ಸೋಂಕು ಕಾಣಿಸಿಕೊಂಡ ನಂತರ ಆರೋಗ್ಯ ಇಲಾಖೆ ಇದುವರೆಗೆ ಒಟ್ಟು 1195 ಶಂಕಿತ ಪ್ರಕರಣಗಳನ್ನು ತಪಾಸಣೆಗೆ ಒಳಪಡಿಸಿದೆ. ಈ ಪೈಕಿ 349 ಜನರಿಗೆ ಎಚ್1ಎನ್1 ಸೋಂಕು ತಗಲಿರುವುದು ಖಚಿತವಾಗಿದೆ. ಸುಮಾರು 19 ಜನರು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿನ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸೋಂಕು ಹರಡದಂತೆ ತಡೆಗಟ್ಟಲು ಆರೋಗ್ಯ ಇಲಾಕೆ ಈಗಾಗಲೇ ರಾಜ್ಯಾದ್ಯಂತ ವಿವಿಧ ರೀತಿಯ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಆದರೂ, ರೋಗ ಜನರನ್ನು ಬಲಿ ತೆಗೆದುಕೊಳ್ಳುತ್ತಿದೆ. ಹೊರ ರಾಜ್ಯಗಳ ಹಾಗೆ, ಕರ್ನಾಟಕದಲ್ಲಿ ರೋಗ ವೇಗದಲ್ಲಿ ಹರಡುತ್ತಿಲ್ಲ. ಹೀಗಾಗಿ ಯಾರೂ ಭಯ ಪಡಬೇಕಿಲ್ಲ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. ಆದರೂ ಸಾವಿನ ಸಂಖ್ಯೆ ಏರುತ್ತಿರುವುದು ಆತಂಕ ಮೂಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com