

ಗುಲ್ಕನ್ ಇದು ಗುಲಾಬಿ ಹೂವಿನ ಎಸಳುಗಳಿಂದ ಮಾಡಿದ ಒಂದು ಆರೋಗ್ಯದಾಯಕ ಜಾಮ್. ಗುಲ್ಕನ್ ಅನ್ನು ನಿಯಮಿತವಾಗಿ ಸೇವಿಸುವುದರಿಂದ್ ಆರೋಗ್ಯದಲ್ಲಿ ಉತ್ತಮ ಪ್ರಯೋಜನ ಪಡೆಯಬಹುದು.
ಗುಲ್ಕನ್ ಅನ್ನು ಹಲವು ರೀತಿಯಲ್ಲಿ ಬಳಸಬಹುದು. ಕೆಲವರು ಇದನ್ನು ಬಾಯಿಯ ಅಲ್ಸರ್ ನಿವಾರಿಸಲು ಬಳಸುತ್ತಾರೆ. ಇನ್ನು ಕೆಲವರು ಬ್ರೆಡ್ ಗೆ ಜಾಮ್ ರೀತಿಯಲ್ಲಿ ಹಾಕಿಕೊಂಡು ತಿನ್ನುತ್ತಾರೆ. ಆಯುರ್ವೇದದಲ್ಲಿ ಗುಲ್ಕನ್ ಅನ್ನು ವಿಶಿಷ್ಟ ರೀತಿಯಲ್ಲಿ ತಯಾರಿಸುತ್ತಾರೆ.
ಆರಿಸಿದ ತಾಜಾ ಗುಲಾಬಿ ಎಲೆಗಳನ್ನು ತೆಗೆದುಕೊಂಡು ಅದಕ್ಕೆ ಬೆಲ್ಲ ಇಲ್ಲವೇ ಸಕ್ಕರೆ ಸೇರಿಸುತ್ತಾರೆ. ಗುಲ್ಕನ್ ತಯಾರಿಕೆಯಲ್ಲಿ ಶುಂಠಿಯನ್ನು ಬಳಸುತ್ತಾರೆ.
ಇಂತಹ ಗುಲ್ಕನ್ ಅನ್ನು ಪ್ರತಿನಿತ್ಯ ಸೇವಿಸಿದರೆ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ದೂರವಿರಬಹುದು. ಜೊತೆಗೆ ದೇಹವನ್ನು ತಂಪಾಗಿಸುತ್ತದೆ.
ಮಹಿಳೆಯರಿಗೆ ಮುಟ್ಟಿನ ಸಂದರ್ಭದಲ್ಲಿ ಉಂಟಾಗುವ ಹೊಟ್ಟೆನೋವನ್ನು ಶಮನ ಮಾಡುತ್ತದೆ. ಗರ್ಭಿಣಿಯರು ಗುಲ್ಕನ್ ಸೇವಿಸಿದರೆ ಹೆಚ್ಚು ಉತ್ತಮ.
ಗುಲ್ಕನ್ ದೇಹದ ರಕ್ತವನ್ನು ಶುದ್ದೀಕರಿಸುತ್ತದೆ. ನಿಶಕ್ತಿಯನ್ನು ದೂರ ಮಾಡುವ ಗುಣ ಹೊಂದಿರುವ ಗುಲ್ಕನ್ ದೇಹದಲ್ಲಿನ ಅನಗತ್ಯ ಅಂಶಗಳನ್ನು ಹೊರಹಾಕುತ್ತದೆ.
ಬೇಸಿಗೆ ಕಾಲದಲ್ಲಿ ಗುಲ್ಕನ್ ಅನ್ನು ಹೆಚ್ಚಾಗಿ ಸೇವಿಸುವುದರಿಂದ ಉಷ್ಣಾಘಾತ ಮತ್ತು ಮೂಗಿನಲ್ಲಿ ರಕ್ತ ಬರುವುದನ್ನು ತಡೆಗಟ್ಟುತ್ತದೆ.
ಫೈಬರ್ ಅಂಶ ಹೆಚ್ಚು ಪ್ರಮಾಣದಲ್ಲಿ ಹೊಂದಿರುವ ಗುಲ್ಕನ್ ಅನ್ನು ಮಕ್ಕಳಿಗೆ ಪ್ರತಿನಿತ್ಯ ನೀಡುವುದರಿಂದ ಮಲಬದ್ಧತೆ ದೂರಾಗುತ್ತದೆ.
ಒಟ್ಟಿನಲ್ಲಿ ದೇಹವನ್ನು ತಂಪಾಗಿಡುವ ಗುಲ್ಕನ್ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಉಪಯೋಗವಾಗಿದೆ.