ಆರೋಗ್ಯವಂತ ಹೃದಯಕ್ಕೆ ಎರಡು ಬಾರಿ ಸೆಕ್ಸ್ ಮಾಡಿದ್ರೆ ಸಾಕು!

ನವದೆಹಲಿ: ಲೈಂಗಿಕ ಜೀವನ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ವಾರದಲ್ಲಿ ಎರಡು ಬಾರಿ ಲೈಂಗಿಕ ಕ್ರಿಯೆ ನಡೆಸುವುದರಿಂದ ಹೃದಯ ಆರೋಗ್ಯವಾಗಿರುತ್ತದೆ ಎಂದು ಅಮೆರಿಕನ್ ಜರ್ನಲ್ ಆಫ್ ಕಾರ್ಡಿಯಾಲಜಿ ಎಂಬ ಹೆಲ್ತ್ ಸೈಟ್ ತಿಳಿಸಿದೆ.
ಅಮೆರಿಕನ್ ಜರ್ನಲ್ ಆಫ್ ಕಾರ್ಡಿಯಾಲಜಿ ಪ್ರಕಾರ ಒಂದು ವಾರದಲ್ಲಿ ಕನಿಷ್ಠ ಪಕ್ಷ ಎರಡು ಬಾರಿ ಲೈಂಗಿಕ ಕ್ರಿಯೆ ನಡೆಸುವುದರಿಂದ ಪುರುಷರು ಹೃದಯ ಸಂಬಂಧಿ ರೋಗಗಳಿಂದ ದೂರವಿರುತ್ತಾರೆ ಎಂದು ಅಧ್ಯಯನ ತಿಳಿಸಿದೆ.
ಹೃಯದ ಸಂಬಂಧಿ ರೋಗಗಳಿಗೆ ಪ್ರಮುಖ ಕಾರಣ, ಅಧಿಕ ರಕ್ತದೊತ್ತಡ, ಲೈಂಗಿಕ ಕ್ರಿಯೆಯಲ್ಲಿ ಆಕ್ಸಿಟೋಸಿನ್ ಎಂಬ ಹಾರ್ಮೋನ್ ರಕ್ತದ ಒತ್ತಡವನ್ನು ಕಡಿಮೆ ಮಾಡುವುದರಿಂದ ಹೃದಯ ಆರೋಗ್ಯವಾಗಿರುತ್ತದೆ.
ಇನ್ನು ಮಾನಸಿಕ ಒತ್ತಡವೂ ಕೂಡ ಹೃದಯರೋಗಕ್ಕೆ ಕಾರಣವಾಗುತ್ತದೆ. ಸಂಭೋಗ ಕ್ರಿಯೆಯಲ್ಲಿ ಪುರುಷರಿಗೆ ಭೌತಿಕ ಸಂತೋಷ ಸಿಗುವುದರಿಂದ ಮಾನಸಿಕ ಒತ್ತಡ ಕಡಿಮೆ ಮಾಡಲು ಸಹಾಯವಾಗುತ್ತದೆ.
ದೇಹದ ತೂಕ ಕಡಿಮೆ ಮಾಡಿಕೊಳ್ಳಲು ಲೈಂಗಿಕ ಕ್ರಿಯೆ ಸಹಾಯ ಮಾಡುತ್ತದೆ ಎಂದು ಅಧ್ಯಯನ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


