ವಿಶ್ವ ಆರೋಗ್ಯ ದಿನದ ಮಹತ್ವ

ಮನುಷ್ಯ ಉತ್ತಮ ರೀತಿಯಲ್ಲಿ ಬಾಳ್ವೆ ನಡೆಸಲು ಆರೋಗ್ಯ ಅತ್ಯಗತ್ಯ. ಅದು ದೈಹಿಕ ಮತ್ತು ಮಾನಸಿಕ ಆರೋಗ್ಯ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮನುಷ್ಯ ಉತ್ತಮ ರೀತಿಯಲ್ಲಿ ಬಾಳ್ವೆ ನಡೆಸಲು ಆರೋಗ್ಯ ಅತ್ಯಗತ್ಯ. ಅದು ದೈಹಿಕ ಮತ್ತು ಮಾನಸಿಕ ಆರೋಗ್ಯ ಎರಡನ್ನೂ ಒಳಗೊಂಡಿರುತ್ತದೆ. ಆರೋಗ್ಯ ಕಾಳಜಿ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ವಿಶ್ವ ಆರೋಗ್ಯ ಸಂಸ್ಥೆ ಪ್ರತಿವರ್ಷ ಏಪ್ರಿಲ್ 7ನ್ನು ವಿಶ್ವ ಆರೋಗ್ಯ ದಿನವೆಂದು ಆಚರಿಸುತ್ತದೆ.

ಈ ವರ್ಷ ವಿಶ್ವ ಆರೋಗ್ಯ ಸಂಸ್ಥೆ ಆಹಾರದ ಮೂಲಕ ಆಗಮಿಸುವ ರೋಗಗಳ ಕಾಳಜಿಯನ್ನು ವಿಷಯವನ್ನಾಗಿ ಆರಿಸಿಕೊಂಡಿದೆ. "From farm to plate, make food safe." (ಗದ್ದೆಯಿಂದ ತಟ್ಟೆಗೆ, ನಿಮ್ಮ ಆಹಾರ ಸುರಕ್ಷಿತವಾಗಿರಲಿ) ಎಂಬುದು ಈ ವರ್ಷದ ಧ್ಯೇಯವಾಕ್ಯವಾಗಿದೆ. ಲಾಭ ಮಾಡುವ ಗುರಿಯಿಂದ ಕೃತಕವಾಗಿ ಬೆಳೆಯನ್ನು ಪರಿವರ್ತಿಸುವ ರಾಸಾಯನಿಕ ಮತ್ತು ಇತರ ವಿಷಕಾರಿ ವಸ್ತುಗಳ ಬಗ್ಗೆ ಅರಿವು ಮೂಡಿಸುವುದು ಈ ಯೋಜನೆಯ ಪ್ರಮುಖ ಯೋಜನೆಯಾಗಿದೆ.

ವಿಶ್ವ ಆರೋಗ್ಯ ದಿನಾಚರಣೆಯನ್ನು ಸರ್ಕಾರ, ಸರ್ಕಾರೇತರ ಸಂಸ್ಥೆಗಳು, ವಿವಿಧ ಸಂಘಟನೆಗಳು ನಡೆಸಿಕೊಡುತ್ತವೆ.ಸಾರ್ವಜನಿಕರಿಗೆ ಆರೋಗ್ಯ ಮತ್ತು ವಿವಿಧ ಕೆಡುಕುಗಳ ಬಗ್ಗೆ ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ. ಇದರಲ್ಲಿ ಭಾಗವಹಿಸುವ ಸಂಸ್ಥೆಗಳು ವಿವಿಧ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ನೀಡಿ ಹೆಚ್ಚು ಹೆಚ್ಚು ಜನರಿಗೆ ಈ ಮಾಹಿತಿ ಲಭ್ಯವಾಗಲು ನೆರವಾಗುತ್ತವೆ.

ಜನರು ಸೂಕ್ತ ಕಾಲಕ್ಕೆ ತೆಗೆದುಕೊಳ್ಳಬೇಕಾದ ಔಷಧಿ, ಕಾಪಾಡಬೇಕಾದ ನೈರ್ಮಲ್ಯ, ಸ್ವಚ್ಛತಾ ಅಭ್ಯಾಸಗಳು, ನೀರಿನ ಸಂರಕ್ಷಣೆ, ಪರಿಸರದ ಸ್ವಚ್ಛತೆ, ಮೊದಲಾದ ವಿಷಯಗಳ ಬಗ್ಗೆ ಕಾಳಜಿವಹಿಸುವ ಮಾಹಿತಿಯನ್ನು ನೀಡುತ್ತಾರೆ. ಇದರಿಂದ ಸಮಾಜದ ಆರೋಗ್ಯ ಉತ್ತಮಗೊಳ್ಳುತ್ತದೆ. ಆರೋಗ್ಯಕರ ಸಮಾಜ ರೂಪುಗೊಳ್ಳುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com