ಮುಂಬರುವ ಎರಡು ದಶಕಗಳಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸದೇ ಹೋದರೆ ಇದರಿಂದಾಗಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ಮುನ್ನೆಚ್ಚರಿಕೆ ನೀಡಿದ್ದಾರೆ. ಭಾರತ, ಚೀನಾ, ಅಮೆರಿಕ, ಕೆನಡಾ ಮೊದಲಾದ ದೇಶಗಳ ತಜ್ಞರು ಈ ಅಧ್ಯಯನ ತಂಡದಲ್ಲಿ ಭಾಗಿಯಾಗಿದ್ದರು. ಈ ವಾಯುಮಾಲಿನ್ಯವೇ ಅಕಾಲಮೃತ್ಯುಗೆ ಕಾರಣವಾಗುತ್ತಿದೆ ಎಂದು ಅಧ್ಯಯನ ವರದಿಯಲ್ಲಿ ಹೇಳಲಾಗಿದೆ.