ಕೂದಲು ಉದುರುವ ಸಮಸ್ಯೆಗೆ ಇಲ್ಲಿದೆ ಮನೆಮದ್ದು

ರಾಸಾಯನಿಕ ವಸ್ತುಗಳ ಬಳಕೆ, ಒತ್ತಡ ಮತ್ತು ಮಾಲಿನ್ಯವನ್ನು ಇದಕ್ಕೆ ಕಾರಣ. ಜೊತೆಗೆ ಆಹಾರ ಕ್ರಮ, ಕಲವು ಔಷಧಿಗಳ ಅಡ್ಡ ಪರಿಣಾಮ ಕೂಡ ಕೂದಲು ಉದುರಲು ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹಿಂದಿನ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಇಂದು ಹಾಗಲ್ಲ, ಹದಿಹರೆಯದವರ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚುತ್ತಿದೆ.

ರಾಸಾಯನಿಕ ವಸ್ತುಗಳ ಬಳಕೆ, ಒತ್ತಡ ಮತ್ತು ಮಾಲಿನ್ಯವನ್ನು ಇದಕ್ಕೆ ಕಾರಣ. ಜೊತೆಗೆ ಆಹಾರ ಕ್ರಮ, ಕಲವು ಔಷಧಿಗಳ ಅಡ್ಡ ಪರಿಣಾಮ ಕೂಡ ಕೂದಲು ಉದುರಲು ಕಾರಣವಾಗಿವೆ. ಈ ಕೂದಲು ಉದುರುವ ಸಮಸ್ಯೆಗೆ ಮನೆಯಲ್ಲಿಯೇ ಸಿಗುವ ಕೆಲವು ವಸ್ತುಗಳನ್ನು ಬಳಸಿಕೊಂಡು ಪರಿಹಾರ ಕಂಡುಕೊಳ್ಳಬಹುದಾಗಿದೆ.

ಮೆಂತ್ಯಕಾಳುಗಳನ್ನ ರಾತ್ರಿ ನೀರಿನಲ್ಲಿ ನೆನೆಸಿ, ಬೆಳಗ್ಗೆ  ಅದನ್ನು ಮಿಕ್ಸಿಯಲ್ಲಿ ರುಬ್ಬಿ ಪೇಸ್ಟ್ ಮಾಡಿಕೊಳ್ಳಿ, ಅದಕ್ಕೆ ಸ್ವಲ್ಪ ಮೊಸರು ಸೇರಿಸಿ ಮಿಕ್ಸಿ ಮಾಡಿ ತಲೆಗೆ ಹಚ್ಚಿಕೊಳ್ಳಿ. ಸುಮಾರು 30 ನಿಮಿಷಗಳ ನಂತರ ಬಿಸಿನೀರಿನಲ್ಲಿ ತೊಳೆಯಿರಿ, ಸತತ ಒಂದು ವಾರದ ಕಾಲ ಹೀಗೆ ಮಾಡಿದರೇ ಕೂದಲು ಉದುರುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com