ಮೂತ್ರಪಿಂಡದ ಆರೋಗ್ಯ ಕಾಪಾಡಿಕೊಳ್ಳುವುದು ಎಷ್ಟು ಮುಖ್ಯ, ಹೇಗೆ?

ಕಿಡ್ನಿ ಅಥವಾ ಮೂತ್ರಪಿಂಡದ ರೋಗ ಇತ್ತೀಚಿನ ದಿನಗಳಲ್ಲಿ ಕಾಡುವ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ. ಜಗತ್ತಿನಲ್ಲಿ ಸುಮಾರು 850 ಮಿಲಿಯನ್ ಜನರಲ್ಲಿ ಈ ಸಮಸ್ಯೆಯಿದೆ ಎಂದು ಹೇಳಲಾಗುತ್ತಿದೆ.
ಮೂತ್ರಪಿಂಡದ ಆರೋಗ್ಯ ಕಾಪಾಡಿಕೊಳ್ಳುವುದು ಎಷ್ಟು ಮುಖ್ಯ, ಹೇಗೆ?

ಕಿಡ್ನಿ ಅಥವಾ ಮೂತ್ರಪಿಂಡದ ರೋಗ ಇತ್ತೀಚಿನ ದಿನಗಳಲ್ಲಿ ಕಾಡುವ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ. ಜಗತ್ತಿನಲ್ಲಿ ಸುಮಾರು 850 ಮಿಲಿಯನ್ ಜನರಲ್ಲಿ ಈ ಸಮಸ್ಯೆಯಿದೆ ಎಂದು ಹೇಳಲಾಗುತ್ತಿದೆ.

ದೀರ್ಘಕಾಲದ ಮೂತ್ರಪಿಂಡ ಕಾಯಿಲೆ(ಸಿಕೆಡಿ) ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು, 2040ರ ಹೊತ್ತಿಗೆ ಜಗತ್ತಿನಲ್ಲಿ ಸಾವಿಗೆ ಕಾರಣವಾಗುವ 5ನೇ ಸಾಮಾನ್ಯ ಕಾಯಿಲೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಅಭಿವೃದ್ಧಿ ಹೊಂದಿರುವ ದೇಶಗಳಲ್ಲಿ ವಾರ್ಷಿಕ ಆರೋಗ್ಯ ವಲಯಕ್ಕೆ ಮೀಸಲಿಡುವ ಬಜೆಟ್ ನಲ್ಲಿ ಶೇಕಡಾ 2 ರಿಂದ 3ರಷ್ಟು ಮೂತ್ರಪಿಂಡದ ಡಯಾಲಿಸಿಸ್ ಮತ್ತು ಕಸಿಗೆ ವೆಚ್ಚವಾಗುತ್ತದೆ. ಈ ದೇಶಗಳ ಒಟ್ಟು ಜನಸಂಖ್ಯೆಯ ಶೇಕಡಾ 0.03ಕ್ಕಿಂತ ಕಡಿಮೆ ವೆಚ್ಚವಾಗುತ್ತದೆ ಎಂದು ಅಂದಾಜು ಹಾಕಲಾಗಿದೆ. ಇನ್ನು ಕಡಿಮೆ ಆದಾಯವನ್ನು ಹೊಂದಿರುವ ಮತ್ತು ಮಧ್ಯಮ ಆದಾಯವಿರುವ ದೇಶಗಳಲ್ಲಿ ಮೂತ್ರಪಿಂಡದ ವೈಫಲ್ಯ ಮತ್ತು ಇತರ ಸಮಸ್ಯೆಗಳನ್ನು ಹೊಂದಿರುವವರಿಗೆ ಡಯಾಲಿಸಿಸ್ ಮತ್ತು ಕಿಡ್ನಿ ಕಸಿಗೆ ಬೇಕಾದಷ್ಟು ಹಣವಿರುವುದಿಲ್ಲ.

ಸಕ್ಕರೆ ಕಾಯಿಲೆ, ಸ್ಥೂಲಕಾಯ, ಅಧಿಕ ರಕ್ತದೊತ್ತಡ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಾಡುತ್ತಿರುವ ಆರೋಗ್ಯ ಸಮಸ್ಯೆಯಾಗಿದೆ. ಇವುಗಳಿಗೆ ಸರಿಯಾದ ಚಿಕಿತ್ಸೆಗಳಿಲ್ಲದಿದ್ದರೆ ಮತ್ತು ಇವುಗಳ ಬಗ್ಗೆ ಜಾಗೃತೆ ವಹಿಸದಿದ್ದರೆ ಅದು ಮೂತ್ರಪಿಂಡದ ಸಮಸ್ಯೆಗೆ ಕಾರಣವಾಗಬಹುದು. ಮೂತ್ರಪಿಂಡದ ಸಮಸ್ಯೆಯಿಲ್ಲದ ಕಾಯಿಲೆಗಳಿಗೆ ಬೇರೆ ಔಷಧಗಳನ್ನು ಬಳಸುವುದು, ನೋವು ನಿವಾರಕ ಮತ್ತು ಮೂತ್ರಪಿಂಡದ ವಿಷಕಾರಿ ಪ್ರತಿಜೀವಕಗಳಿಂದ ಮೂತ್ರಪಿಂಡದ ಕಾಯಿಲೆಗಳು ಬರುತ್ತವೆ. 

ಮೂತ್ರಪಿಂಡದ ಸಮಸ್ಯೆಯನ್ನು ತಡೆಗಟ್ಟುವುದು ಹೇಗೆ: ಕಿಡ್ನಿ ಸಮಸ್ಯೆಗಳನ್ನು ತಡೆಗಟ್ಟಲು ಮನುಷ್ಯನು ಮಧುಮೇಹ ಮತ್ತು ಅಧಿಕ ರಕ್ತದೊತ್ತಡ, ಅನಾರೋಗ್ಯಕರ ಆಹಾರ ಕ್ರಮ, ಜೀವನಶೈಲಿಗಳಲ್ಲಿ ಮಾರ್ಪಾಡುಗಳು ಅಗತ್ಯ.ಮೂತ್ರ ಮತ್ತು ರಕ್ತ ಪರೀಕ್ಷೆ ಮಾಡಿಸಿ ಅಧಿಕ ಮೂತ್ರಪಿಂಡದ ಸಮಸ್ಯೆಯನ್ನು ತಡೆಗಟ್ಟಬಹುದು. ಆರೋಗ್ಯಕರ ಜೀವನಶೈಲಿ, ಉತ್ತಮ ಡಯಟ್, ಶಾರೀರಿಕ ಮತ್ತು ಮಾನಸಿಕ ಚಟುವಟಿಕೆಗಳು ಮನುಷ್ಯನಿಗೆ ಅತ್ಯಗತ್ಯ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com