ಹೊರನಾಡು ಕನ್ನಡಿಗ

ಪತ್ರಿಕೋದ್ಯಮಕ್ಕೆ ಮಹತ್ವದ ಸ್ಥಾನ: ಪ್ರೊ. ಮಲ್ಲಮೂಲೆ

Published On :

ಕಾಸರಗೋಡು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕೋದ್ಯಮವು ಮಹತ್ವದ ಸ್ಥಾನವನ್ನು ಪಡೆದುಕೊಂಡಿದೆ. ನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗಗಳಂತೆ ಪತ್ರಿಕಾಂಗ ರಾಷ್ಟ್ರದ ನಾಲ್ಕನೆಯ ಬಲಿಷ್ಠ ಅಂಗ ಎಂದು ಬಣ್ಣಿಸಲ್ಪಟ್ಟಿದೆ ಎಂದು ಇಲ್ಲಿನ ಸರ್ಕಾರಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಪ್ರೊ. ರತ್ನಾಕರ ಮಲ್ಲಮೂಲೆ ಹೇಳಿದ್ದಾರೆ.
ಕಾಸರಗೋಡಿನಲ್ಲಿ ನಡೆದ ಕನ್ನಡ ಪತ್ರಿಕಾ ದಿನಾಚರಣೆಯಂಗವಾಗಿ ಕನ್ನಡ ಭವನ ಗ್ರಂಥಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಪತ್ರಿಕೋದ್ಯಮ ಕುರಿತು ವಿಶೇಷ ಉಪನ್ಯಾಸ ನೀಡುತ್ತಿದ್ದ ಅವರು ಕನ್ನಡಿಗರಲ್ಲಿ ಭಾಷಾ ಪ್ರೇಮವನ್ನು ಉದ್ದೀಪನಗೊಳಿಸಿ ಅವರಲ್ಲಿ ಕನ್ನಡ ಜಾಗೃತಿಯನ್ನುಂಟು ಮಾಡಲು ಇಲ್ಲಿನ ಪತ್ರಕರ್ತರು ಪ್ರಾಮಾಣಿಕವಾಗಿ ದುಡಿಯುತ್ತಿದ್ದಾರೆ. ಆದುದರಿಂದಲೇ ಇತರ ಕಡೆಗಳಲ್ಲಿ ಕಂಡು ಬರುವ ಪತ್ರಿಕೋದ್ಯಮದ ಇತಿ ಮಿತಿಗಳನ್ನು ಕಾಸರಗೋಡಿನಲ್ಲಿ ಇಂದಿಗೂ ಕಾಣಲು ಸಾಧ್ಯ. ಈ ಆರೋಗ್ಯ ಪೂರ್ಣ ಬೆಳವಣಿಗೆ ಮುಂದುವರಿಯಬೇಕು ಎಂದು ನುಡಿದರು. ಪತ್ರಕರ್ತ ರಾಧಾಕೃಷ್ಣ ಕೆ. ಉಳಿಯತಡ್ಕ ಮತ್ತು ಕಾಸರಗೋಡು ಚಾನೆಲ್ ನೆಟ್ ವರ್ಕ್‌ನ ಪಾಲುದಾರ ಪುರುಷೋತ್ತಮ ಎಂ. ನಾಯಕ್, ಅಡ್ಕತ್ತಬೈಲು ಅವರಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕನ್ನಡ ಭವನ ಗ್ರಂಥಾಲಯದ ಸಂಸ್ಥಾಪಕ ನಿರ್ದೇಶಕ ಕೆ. ವಾಮನರಾವ್ ಬೇಕಲ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.
ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಸ್ವಾಗತಿಸಿದರು. ಕಾರ್ಯದರ್ಶಿ ಕೆ. ಜಗದೀಶ ಕೂಡ್ಲು ನಿರೂಪಿಸಿದರು. ಶ್ರೀರಾಮನಾಥ ಸಾಂಸ್ಕೃತಿಕ ಭವನದ ಸಮಿತಿ ಪ್ರಧಾನ ಸಂಚಾಲಕ ಕೆ. ಗುರುಪ್ರಸಾದ್ ಕೋಟೆಕಣಿ ವಂದಿಸಿದರು.
ಮಂಗಳೂರಿನಲ್ಲಿ 1843 ಜುಲೈ 1ರಂದು ಮಂಗಳೂರು ಸಮಾಚಾರ ಎಂಬ ಕನ್ನಡದ ಮೊದಲ ಪತ್ರಿಕೆಯು ಪ್ರಾರಂಭಗೊಂಡಿತು. ಈ ದಿನವನ್ನು ಅಖಿಲ ಕರ್ನಾಟಕ ರಾಜ್ಯಾದ್ಯಂತ ಪ್ರತಿ ವರ್ಷ ಕನ್ನಡ ಪತ್ರಿಕಾ ದಿನವನನ್ನಾಗಿ ಆಚರಿಸಲಾಗುತ್ತಿದೆ. ಗಡಿನಾಡು ಕಾಸರಗೋಡಿನಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ಕಳೆದ 23 ವರ್ಷಗಳಿಂದ ಆಚರಿಸಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.