ಕೇರಳದಲ್ಲಿ ಮಲಯಾಳ ಕಡ್ಡಾಯ: ಕಾಸರಗೋಡಿಗೆ ವಿಶೇಷ ವಿನಾಯತಿಗೆ ಮನವಿ
ಕಾಸರಗೋಡು: ಕೇರಳ ರಾಜ್ಯದಲ್ಲಿ ಸರ್ಕಾರಿ ನೌಕರಿ ಪಡೆಯಬೇಕಾದರೆ ಮಲಯಾಳವನ್ನು ಕಡ್ಡಾಯವಾಗಿ ಕಲಿತಿರಬೇಕೆಂಬ ಸರಕಾರದ ಹಾಗೂ ಕೇರಳ ಲೋಕಸೇವಾ ಆಯೋಗದ ಆದೇಶದಿಂದ ಕಾಸರಗೋಡು ಜಿಲ್ಲೆಯ ಕನ್ನಡಿಗರಿಗೆ ವಿನಾಯತಿ ನೀಡುವಂತೆ ಕೇರಳ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸುವುದಾಗಿ ಕಾಸರಗೋಡು ಜಿಲ್ಲಾಧಿಕಾರಿ ಪಿ.ಎಸ್. ಮುಹಮ್ಮದ್ ಸಗೀರ್ ಭರವಸೆ ನೀಡಿದ್ದಾರೆ.
ಕಾಸರಗೋಡಿನ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕಾಸರಗೋಡು ಜಿಲ್ಲಾ ಭಾಷಾ ಅಲ್ಪಸಂಖ್ಯಾಕರ ಸಮಿತಿಯ ಸದಸ್ಯ ಶಿವರಾಮ ಕಾಸರಗೋಡು ನೇತೃತ್ವದ ನಿಯೋಗವು ಕಾಸರಗೋಡು ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ ಸರ್ಕಾರಿ ಉದ್ಯೋಗದಲ್ಲಿ ಮಲಯಾಳ ಕಡ್ಡಾಯ ಆದೇಶದಿಂದ ಕಾಸರಗೋಡು ಜಿಲ್ಲೆಯನ್ನು ಹೊರತುಪಡಿಸಬೇಕೆಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದರು.
ಜಿಲ್ಲಾಧಿಕಾರಿಯವರನ್ನು ಭೇಟಿಯಾದ ನಿಯೋಗದಲ್ಲಿ ಕೆ. ನಿರಂಜನ ಕೊರಕ್ಕೋಡು, ಜಯಾನಂದ ಕುಮಾರ್ ಹೊಸದುರ್ಗ, ಕೆ. ಗುರುಪ್ರಸಾದ ಕೋಟೆಕಣಿ, ಕೆ. ಜಗದೀಶ ಕೂಡ್ಲು, ಕೆ.ಜೆ. ಜೋಗೇಂದ್ರನಾಥ್ರಾವ್ ವಿದ್ಯಾನಗರ, ಶ್ರೀಕಾಂತ ಕಾಸರಗೋಡು, ರಾಜಶೇಖರ ಕೆ. ಕಾಸರಗೋಡು ಮೊದಲಾದವರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

