ಹೊರನಾಡು ಕನ್ನಡಿಗ

ಕನ್ನಡದ ಅಸ್ತಿತ್ವಕ್ಕೆ ಧಕ್ಕೆ ತರುವ ಯತ್ನದ ವಿರುದ್ಧ ಧ್ವನಿ: ಕರೆ

Published On :

ಕಾಸರಗೋಡು: ಕಾಸರಗೋಡಿನಲ್ಲಿ ಕನ್ನಡ ಸ್ಥಳನಾಮಗಳು ಮಾಯವಾಗುತ್ತಿದ್ದು ಕನ್ನಡದ ಇತಿಹಾಸವನ್ನು ತಿರುಚುವ ಯತ್ನ ನಡೆಯುತ್ತಿದೆ. ಕನ್ನಡದ ಅಸ್ತಿತ್ವಕ್ಕೆ ಧಕ್ಕೆ ತರುವ ಪ್ರಯತ್ನದ ವಿರುದ್ಧ ಧ್ವನಿ ಎತ್ತಬೇಕು ಎಂದು ಕಾಸರಗೋಡು ಸರ್ಕಾರಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಪ್ರೊ. ಎ. ಶ್ರೀನಾಥ್ ಕಾಸರಗೋಡು ಹೇಳಿದ್ದಾರೆ.
ಅವರು ಕರ್ನಾಟಕ ಇತಿಹಾಸ ಅಕಾಡೆಮಿ, ಬೆಂಗಳೂರು ಇದರ ನೇತೃತ್ವದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ, ಕಾಸರಗೋಡು ಇದರ ಆಶ್ರಯದಲ್ಲಿ ಕಾಸರಗೋಡು ನುಳ್ಳಿಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದಲ್ಲಿ ಏರ್ಪಡಿಸಿದ ಕಾಸರಗೋಡು ಜಿಲ್ಲಾ ಐತಿಹಾಸಿಕ ಪರಂಪರೆ ಉಳಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕಾಸರಗೋಡಿನ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಪ್ರಾಸ್ತಾವಿಕವಾಗಿ ಮಾತನಾಡಿದರು. ಇತಿಹಾಸ ಮತ್ತು ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಕರ್ನಾಟಕ ಇತಿಹಾಸ ಅಕಾಡೆಮಿ ಮುಂದಾಗಿದ್ದು ಮುಂದಿನ ಜನಾಂಗಕ್ಕೆ ಅವುಗಳ ಮಹತ್ವವನ್ನು ತಿಳಿಯಪಡಿಸಬೇಕು ಎಂದರು.
ನಿವೃತ್ತ ಅಧ್ಯಾಪಕರಾದ ಕೃಷ್ಣರಾಜ ಪುಣಿಂಚತ್ತಾಯ, ಶ್ರೀನಿವಾಸಭಟ್, ನಿವೃತ್ತ ಸಹಾಯಕ ಜಿಲ್ಲಾಧಿಕಾರಿ ಬಿ. ಬಾಲಕೃಷ್ಣ ಅಗ್ಗಿತ್ತಾಯ ಶುಭಾಶಂಸನೆಗೈದರು. ಇತಿಹಾಸದ ಕುರಿತು ಜನಜಾಗೃತಿ ಮೂಡಿಸುವ ಕರಪತ್ರ, ಭಿತ್ತಿ ಪತ್ರಗಳನ್ನು ಪ್ರದರ್ಶಿಸಲಾಯಿತು. ಐತಿಹಾಸಿಕ ಪರಂಪರೆ ಉಳಿಸಿಕೊಳ್ಳುವ ಪ್ರತಿಜ್ಞೆ ಕೈಗೊಳ್ಳಲಾಯಿತು. ಕನ್ನಡಭವನ ಗ್ರಂಥಾಲಯದ ಸಂಸ್ಥಾಪಕ ಕೆ. ವಾಮನರಾವ್ ಬೇಕಲ್, ಅಧ್ಯಕ್ಷ ರಾಧಾಕೃಷ್ಣ ಕೆ. ಉಳಿಯತಡ್ಕ, ಕೋಶಾಧಿಕಾರಿ ಕೆ.ಪಿ. ಸಂಧ್ಯಾರಾಣಿ ನೇತೃತ್ವ ನೀಡಿದರು. ಶ್ರೀಮತಿ ಮಾಲತಿ ಜಗದೀಶ್ ಪ್ರಾರ್ಥಿಸಿದರು. ಕಾರ್ಯದರ್ಶಿ ಕೆ. ಜಗದೀಶ್ ಕೂಡ್ಲು ಸ್ವಾಗತಿಸಿದರು. ಕೆ. ಗುರುಪ್ರಸಾದ್ ಕೋಟೆಕಣಿ ನಿರೂಪಿಸಿದರು. ಸಂಚಾಲಕ ದಿವಾಕರ ಪಿ. ಅಶೋಕನಗರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.